ಉಪ್ಪಿನಂಗಡಿ: ಗಬ್ಬದ ದನವನ್ನು ಕದ್ದು ಮಾಲೀಕನ ಜಮೀನಿನಲ್ಲಿ ಮಾಂಸ ಮಾಡಿದ ಕಟುಕರು

ಸಮಗ್ರ ನ್ಯೂಸ್: ದನದ ಕೊಟ್ಟಿಗೆಯಿಂದ ಗಬ್ಬದ ದನವನ್ನು ಕದ್ದು , ಬಳಿಕ ಕಟುಕರು ದನದ ಮಾಲೀಕನ ಜಮೀನಿನಲ್ಲಿಯೇ ಹತ್ಯೆ ಮಾಡಿ ಅದನ್ನು ಮಾಂಸ ಮಾಡಿ ಸಾಗಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿ ನಡೆದಿದೆ.

Ad Widget ... ..

ದೇಜಪ್ಪ ಮೂಲ್ಯ ಅವರ ಹಟ್ಟಿಯಿಂದ ಗಬ್ಬದ ದನವನ್ನು ಕದ್ದೊಯ್ದ ಕಟುಕರು ಅವರ ಜಮೀನಿನಲ್ಲಿಯೇ ಹತ್ಯೆ ಮಾಡಿ ಮಾಂಸವನ್ನು ಸಾಗಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಗುರುವಾರ ನಸುಕಿನ 2.30ರ ವೇಳೆಗೆ ಹಸು ಹಟ್ಟಿಯಲ್ಲಿಯೇ ಇರುವುದನ್ನು ಕಂಡಿದ್ದು, ಮುಂಜಾನೆ 6.30ಕ್ಕೆ ಹಟ್ಟಿಗೆ ನಾಪತ್ತೆಯಾಗಿತ್ತು. ಹುಡುಕಾಟ ನಡೆಸಿದಾಗ ತಮ್ಮ ಜಮೀನಿನಲ್ಲಿ ಅದರ ಚರ್ಮ ಮತ್ತು ಅಂಗಾಂಗಗಳು ಚದುರಿ ಬಿದ್ದಿರುವುದು ಕಾಣಿಸಿತು. ಕಳ್ಳರು ಅಲ್ಲಿಯೇ ಕೊಂದು ಚರ್ಮ ಸುಲಿದು ಮಾಂಸವನ್ನು ಕೊಂಡೊಯ್ದಿದ್ದಾರೆ ಎಂದು ತಿಳಿಸಿದ್ದಾರೆ.

Ad Widget

ಆರೋಪಿಗಳನ್ನು ಪತ್ತೆಹಚ್ಚಿ ನ್ಯಾಯ ಒದಗಿಸುವಂತೆ ಅಗ್ರಹಿಸಿದ್ದಾರೆ.
ಸ್ಥಳಕ್ಕೆ ಪುತ್ತೂರು ಉಪ ವಿಭಾಗದ ಡಿವೈಎಸ್ಪಿ ಅರುಣ್ ನಾಗೇಗೌಡ, ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ರವಿ ಬಿ.ಎಸ್, ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕ ಅವಿನಾಶ್ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದ್ದಾರೆ. ಅಲ್ಲದೆ ಘಟನೆಯನ್ನು ಖಂಡಿಸಿ ಹಿಂದೂಪರ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದೇ ಹೋದಲ್ಲಿ ಉಗ್ರ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Leave a Comment

Your email address will not be published. Required fields are marked *