ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ದ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ವೆಟರ್ನರಿ ಆಸ್ಪತ್ರೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಟ್ರಾನ್ಸ್ ಫರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಸೆ.5 ರಂದು ನಡೆದಿದೆ.
ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ತೀವ್ರತೆಯಿಂದಾಗಿ ಎರಡು ವಿದ್ಯುತ್ ಕಂಬಗಳು ಮುರಿದಿದೆ.
ಕಂಬಗಳು ಸಂಪೂರ್ಣವಾಗಿ ಬಿದ್ದುಹೋಗಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಆದರೆ ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದಂತಾಗಿದೆ.ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.







