ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆಗೈದಿದ್ದು ಮಾವ ವಿಠಲ ಗೌಡ| ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಸಮಗ್ರ‌‌ ನ್ಯೂಸ್: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಯೊಂದು ನಡೆದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಸೌಜನ್ಯಳ ಮಾವ ವಿಠಲ ಗೌಡ ಅವರೇ ಈ ಕೊಲೆಯನ್ನು ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ.

Ad Widget ... ..

ಸ್ನೇಹಮಯಿ ಕೃಷ್ಣ, ಈ ಪ್ರಕರಣದ ಬಗ್ಗೆ ತಾವು ಸಂಗ್ರಹಿಸಿದ ಸಾಕ್ಷ್ಯಗಳನ್ನು ಆಧರಿಸಿ ವಿಠಲ ಗೌಡ ಅವರ ವಿರುದ್ಧ ದೂರು ನೀಡುವುದಾಗಿ ತಿಳಿಸಿದರು. ‘ಸೌಜನ್ಯ ಮತ್ತು ವಿಠಲ ಗೌಡ ನಡುವೆ ಅಸಭ್ಯ ವರ್ತನೆಗಳ ಬಗ್ಗೆ ನನಗೆ ಮಾಹಿತಿ ಇದೆ. ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದಾಗ ಸೌಜನ್ಯ ಕಿರುಚಿರಬಹುದು ಮತ್ತು ಆಗ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂಬ ಅನುಮಾನವಿದೆ’ ಎಂದು ಖಾಸಗಿ ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

Ad Widget

ಸ್ನೇಹಮಯಿ ಕೃಷ್ಣ ಅವರ ಪ್ರಕಾರ, ವಿಠಲ ಗೌಡ ಸೌಜನ್ಯಳನ್ನು ಬೇರೆಡೆ ಕೊಲೆ ಮಾಡಿ ಆಕೆಯ ದೇಹವನ್ನು ಅಲ್ಲಿ ತಂದು ಎಸೆದಿದ್ದಾರೆ. ಈ ಕೃತ್ಯವನ್ನು ಸಂತೋಷ್ ರಾವ್ ನೋಡಿರಬಹುದು ಮತ್ತು ಅದಕ್ಕಾಗಿಯೇ ಆತನಿಗೆ ಬೆದರಿಕೆ ಹಾಕಿ ಸುಮ್ಮನಿರಿಸಲಾಗಿದೆ. ವಿಠಲ ಗೌಡರ ಮಂಪರು ಪರೀಕ್ಷೆ (ನಾರ್ಕೋ ಅನಾಲಿಸಿಸ್) ನಡೆಸಿದರೆ ಸತ್ಯ ಹೊರಬರಬಹುದು ಎಂದು ಅವರು ಅಭಿಪ್ರಾಯಪಟ್ಟರು. ಈ ಪ್ರಕರಣವನ್ನು ಈವರೆಗೆ ತನಿಖೆ ಮಾಡಿರದ ಹೊಸ ಆಯಾಮಗಳಲ್ಲಿ ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *