ಮದ್ದೂರು ಗಲಾಟೆಗೆ ಮುಸ್ಲಿಮರೇ ಕಾರಣ – ಸಚಿವ ಚೆಲುವರಾಯ ಸ್ವಾಮಿ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪೂರ್ಣ ಪ್ರಮಾಣದಲ್ಲಿ ಮುಸ್ಲಿಂ ಕಡೆಯಿಂದಲೇ ಆಗಿದ್ದು, ಗಲಭೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಹಿಂದೂಗಳ ಮೇಲೆ ಎಫ್‌ಐಆರ್‌ ಹಾಕಿಲ್ಲ ಯಾರನ್ನೂ ಬಂಧನ ಮಾಡಿಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

. Ad Widget . Ad Widget . Ad Widget .

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರಲ್ಲಿ ಇಬ್ಬರು ಚನ್ನಪಟ್ಟಣದವರು, ಉಳಿದವರೆಲ್ಲ ಮದ್ದೂರು ಪಟ್ಟಣದವರು. ಪ್ರಕರಣದಲ್ಲಿ ಸ್ವಲ್ಪ ಮಟ್ಟಿಗೆ ಕಾನೂನು ಸುವ್ಯವಸ್ಥೆಯಲ್ಲಿ ವೈಫಲ್ಯವಾಗಿರುವ ಅನುಮಾನವಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿಯುವವರೆಗೂ ಏನೂ ಹೇಳುವುದಿಲ್ಲ. ಈ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಅವರಿಗೆ ಶಾಂತಿ ಬೇಕಿಲ್ಲ. ಅದಕ್ಕೆ ಶಾಂತಿ ಸಭೆಗೆ ಬಂದಿಲ್ಲ ಎಂದರು. ನನ್ನ ಮಾಹಿತಿ ಪ್ರಕಾರ ಮದ್ದೂರಲ್ಲಿ ಇನ್ನೂ ನಾಲ್ಕೈದು ಸಾಮೂಹಿಕ ಗಣಪತಿ ಇವೆ. ಆದರೆ, ನಂಬರ್ ಜಾಸ್ತಿ ಮಾಡಲು ಬಿಜೆಪಿ-ಜೆಡಿಎಸ್‌ ನಾಯಕರು ಬೆಂಗಳೂರಿನಿಂದ ಗಣೇಶ ಮೂರ್ತಿ ಖರೀದಿ ಮಾಡಿ ತಂದಿದ್ದಾರೆ ಎಂದು ಹೇಳಿದರು.

Leave a Comment

Your email address will not be published. Required fields are marked *