ಹಾಸನದಲ್ಲಿ ಗಣಪತಿ ಮೆರವಣಿಗೆ ಮೇಲೆ ಹರಿದ ಲಾರಿ| ನಾಲ್ವರು ಸಾವು, 20 ಮಂದಿ ಗಂಭೀರ

ಸಮಗ್ರ ನ್ಯೂಸ್: ಗಣಪತಿ ವಿಸರ್ಜನಾ ಮೆರವಣೆಗೆ ಮೇಲೆ ಟ್ರಕ್ ಒಂದು ನಿಯಂತ್ರಣ ತಪ್ಪಿ ಹರಿದ ಪರಿಣಾಮ ಕನಿಷ್ಠ ನಾಲ್ಕು ಮಂದಿ ಸಾವನ್ನಪ್ಪಿ ಹಲವು ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

Ad Widget ... .. Ad Widget .

ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ದೌಡಾಯಿಸಿದ್ದಾರೆ. ಅದ್ಧೂರಿಯಾಗಿ ಗಣೇಶ ಮೆರವಣಿಗೆ ಸಾಗುತ್ತಿರುವ ವೇಳೆ ಟ್ರಕ್​ವೊಂದು ಜನರ ಮೇಲೆ ನುಗ್ಗಿದೆ. ಚಾಲಕನ ಅಜಾಗುರಕತೆಯಿಂದ ಈ ಘಟನೆ ನಡೆದಿದೆ. ಡಿವೈಡರ್​ಗೆ ಡಿಕ್ಕಿ ಆಗಿ ಜನರ ಮೇಲೆ ಟ್ರಕ್ ಹರಿದಿದೆ. ಇದರ ಪರಿಣಾಮ ಮೆರವಣಿಗೆಯಲ್ಲಿದ್ದ ನಾಲ್ವರು ಸ್ಥಳದಲ್ಲೇ ಜೀವ ಬಿಟ್ಟಿದ್ದಾರೆ. ಇನ್ನು ಸಾವಿನ ಸಂಖ್ಯೆಯ ಹೆಚ್ಚಾಗುವ ಸಾಧ್ಯತೆ ಇದೆ.

Ad Widget

ಸದ್ಯ ಸ್ಥಳದಲ್ಲೇ ಸಾವು-ನೋವು ಹೆಚ್ಚಾಗುವ ಸಂಭವವಿದೆ. ಲಾರಿ ಏಕಾಏಕಿ ನುಗ್ಗಿದ್ದರಿಂದ 10 ರಿಂದ 15 ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಕೆಲವರಂತೂ ನೋವಿನಿಂದ ನರಳುತ್ತಿದ್ದಾರೆ. ಇದು ಅಪಘಾತ ವಲಯ ಎಂದು ಗೊತ್ತಿದ್ದರೂ ಟ್ರಕ್ ವೇಗವಾಗಿ ಬಂದಿದ್ದೇ ಈ ದುರಂತಕ್ಕೆ ಕಾರಣವಾಗಿದೆ.

Leave a Comment

Your email address will not be published. Required fields are marked *