ಹಾಸನ ಮೆರವಣಿಗೆ ದುರಂತ| ಪ್ರಧಾನಿಯಿಂದ ತಲಾ ಎರಡು ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆಟ್ರಕ್ ಹರಿದು ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

Ad Widget ... ..

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು ಟ್ರಕ್ಹರಿದು ಸಾವನ್ನಪ್ಪಿದ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲ 50,000 ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ( PMNR) ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Ad Widget

ಇನ್ನು ಘಟನೆಯ ಕುರಿತಂತೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮೋದಿಯವರು ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಗಾಯಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಾವನ್ನಪ್ಪಿದವರ ಕುಟುಂಬಕ್ಕೆ ನನ್ನ ನಮನಗಳು. ಅಪಘಾತದ ಸುದ್ದಿ ಕೇಳಿ ತುಂಬಾ ನೋವಾಗಿದೆ. ಗಣೇಶ ವಿಸರ್ಜನೆ ವೇಳೆ ಇಂತಹ ದುರ್ಘಟನೆ ನಡೆದಿರುವುದು ನಿಜಕ್ಕೂ ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದ್ದಾರೆ.

Leave a Comment

Your email address will not be published. Required fields are marked *