ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಗೆ ನೋಟೀಸ್ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ಎಸ್.ಐ.ಟಿ ಗೆ ನೋಟೀಸ್ ನೀಡಿದೆ.

Ad Widget ... ..

ಈ ಸಂಬಂಧ ಧರ್ಮಸ್ಥಳ ಗ್ರಾಮದ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಧರ್ಮಸ್ಥಳ ಸಾಮೂಹಿಕ ಅಂತ್ಯ ಸಂಸ್ಕಾರ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಒದಗಿಸುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ ಅವರಿಗೆ ಸೂಚಿಸಿ, ವಿಚಾರಣೆಯನ್ನು ಗುರುವಾರಕ್ಕೆ (ಸೆಪ್ಟೆಂಬರ್ 18) ಮುಂದೂಡಿತು.

Ad Widget

ಅರ್ಜಿದಾರರ ಪರ ವಕೀಲ ದೀಪಕ್ ಖೋಸ್ಲಾ ಅವರು “ಅರ್ಜಿದಾರರು ಎಸ್‌ಐಟಿಗೆ ಆ 6 ಹಾಗೂ 29 ರಂದು ಅರ್ಜಿ ಸಲ್ಲಿಸಿದ್ದು, ಧರ್ಮಸ್ಥಳದಲ್ಲಿ ಅನಾಮಧೇಯ ಶವಗಳನ್ನು ಅಕ್ರಮವಾಗಿ ದಫನ ಮಾಡಿರುವ ಬಗ್ಗೆ ಸ್ಥಳಗಳನ್ನು ಗುರುತಿಸಿದ್ದಾರೆ. ಈ ಸ್ಥಳಗಳಲ್ಲಿ ಕೂಡಲೇ ಭೂಮಿ ಅಗೆದು ಪರಿಶೀಲನೆ ನಡೆಸಲು ಎಸ್‌ಐಟಿಗೆ ನಿರ್ದೇಶನ ನೀಡಬೇಕು” ಗುರುತಿಸಿರುವ ಜಾಗಗಳಲ್ಲಿ ಮೃತದೇಹಗಳ ಅವಶೇಶಷಗಳು ಪ್ರಾಣಿಗಳು ಹಾಗೂ ಮನುಷ್ಯರಿಗೆ ಕಾಣುವಂತಿದ್ದು ಕೂಡಲೇ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಎಸ್‌ಐಟಿಗೆ ಆಗಸ್ಟ್ 29ರಂದು ನೀಡಿರುವ ಮನವಿಯನ್ನು ಪರಿಶೀಲಿಸಿ ಈ ಕೂಡಲೇ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು. ಅರ್ಜಿದಾರರು ತೋರಿಸುವ ಸ್ಥಳಗಳಲ್ಲಿ ಭೂಮಿ ಅಗೆಯಲು ಅನುವಾಗುವಂತೆ ಅರ್ಜಿದಾರರಿಗೆ ಜೊತೆಯಾಗಿ ನ್ಯಾಯಾಂಗ ರಿಜಿಸ್ಟ್ರಾರ್ ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಕೋರ್ಟ್ ಕಮಿಷನ‌ರ್ ನೇಮಕ ಮಾಡಬೇಕು. ಈ ಕುರಿತು ವಾಸ್ತವಿಕ ವರದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Leave a Comment

Your email address will not be published. Required fields are marked *