ಧರ್ಮಸ್ಥಳ ಬುರುಡೆ ಪ್ರಕರಣ| ಮತ್ತೆ ಶೋಧ ಕಾರ್ಯಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಬೆಳವಣಿಗೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೇತ್ರಾವತಿ ಸ್ನಾನಘಟ್ಟದ ಪಕ್ಕದ ಕಾಡಿನಲ್ಲಿ ‘ನೆಲದ ಮೇಲೆಯೇ ಮೃತದೇಹಗಳ ಅವಶೇಷ ಸಿಕ್ಕಿವೆ’ ಎನ್ನಲಾದ ಪ್ರದೇಶದಲ್ಲಿ ವ್ಯಾಪಕ ಶೋಧ ನಡೆಸಲು ಸಿದ್ಧತೆ ನಡೆಸಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಸಾಕ್ಷಿ ದೂರುದಾರ ಪೊಲೀಸರಿಗೆ ತಂದೊಪ್ಪಿಸಿದ್ದ ತಲೆಬುರುಡೆಯನ್ನು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕ ಬಂಗ್ಲೆಗುಡ್ಡೆಯ ಕಾಡಿನಿಂದ ಹೊರತೆಗೆಯಲಾಗಿತ್ತು. ತಲೆಬುರುಡೆ ಇದ್ದ ಆ ಜಾಗವನ್ನು ತೋರಿಸಿದ್ದ ಧರ್ಮಸ್ಥಳ ಗ್ರಾಮದ ಪಾಂಗಾಳದ ವಿಠಲ ಗೌಡ ಅವರನ್ನು ಎಸ್‌ಐಟಿ ಅಧಿಕಾರಿಗಳು ಈಚೆಗೆ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದರು. ಆ ಜಾಗವು ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ವ್ಯಾಪ್ತಿಯಲ್ಲಿದೆ. ಆ ಸ್ಥಳದ ಮಹಜರು ನಡೆದ ಬಳಿಕ ವಿಠಲ ಗೌಡ ಅವರು ಮಾತನಾಡಿದ್ದ ದೃಶ್ಯಗಳಿದ್ದ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

‘ಬುರುಡೆ ಸಿಕ್ಕಿದ್ದ ಸ್ಥಳದ ಮಹಜರಿಗೆ ತೆರಳಿದ್ದಾಗ ಕಾಡಿನಲ್ಲಿ ಒಂದು ಕಡೆ ಮೂರು ಮೃತದೇಹಗಳ ಹಾಗೂ ಇನ್ನೊಂದು ಕಡೆ ಎಂಟು ಮೃತದೇಹಗಳಿಗೆ ಸಂಬಂಧಿಸಿದ ಅವಶೇಷಗಳು ಕಾಣಿಸಿದ್ದವು. ಮಹಜರಿನ ಸಂದರ್ಭದಲ್ಲಿ ಎಸ್‌ಐಟಿ ಅಧಿಕಾರಿಗಳೂ ಅವುಗಳನ್ನು ನೋಡಿದ್ದಾರೆ’ ಎಂದು ಆ ವಿಡಿಯೊದಲ್ಲಿ ಅವರು ತಿಳಿಸಿದ್ದರು.

ಎಸ್‌ಐಟಿ ಅಧಿಕಾರಿಗಳು ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ಕೆಲ ಅಧಿಕಾರಿಗಳನ್ನು ಬೆಳ್ತಂಗಡಿ ಕಚೇರಿಗೆ ಸೋಮವಾರ ಕರೆಸಿಕೊಂಡು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *