ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿ ಶುಭಾಶಯ ಹೇಳಿದ್ದಾರೆ. ಭಾರತ-ಅಮೆರಿಕ ಸಂಬಂಧಗಳನ್ನು ‘ಹೊಸ ಎತ್ತರಕ್ಕೆ’ ಕೊಂಡೊಯ್ಯುವುದಾಗಿ ಇಬ್ಬರೂ ನಾಯಕರು ದೃಢಪಡಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ 75 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಲು ಆತ್ಮೀಯವಾಗಿ ಕರೆ ಮಾಡಿದರು.
ಪ್ರಧಾನಿ ಮೋದಿ ಅವರು X ನಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಾ, “ನನ್ನ ಸ್ನೇಹಿತ, ಅಧ್ಯಕ್ಷ ಟ್ರಂಪ್, ನನ್ನ 75 ನೇ ಹುಟ್ಟುಹಬ್ಬದಂದು ನಿಮ್ಮ ಫೋನ್ ಕರೆ ಮತ್ತು ಆತ್ಮೀಯ ಶುಭಾಶಯಗಳಿಗಾಗಿ ಧನ್ಯವಾದಗಳು. ನಿಮ್ಮಂತೆಯೇ, ನಾನು ಕೂಡ ಭಾರತ-ಅಮೆರಿಕ ಸಮಗ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಂಪೂರ್ಣವಾಗಿ ಬದ್ಧನಾಗಿದ್ದೇನೆ” ಎಂದು ಹೇಳಿದರು.







