ಧರ್ಮಸ್ಥಳ ಪ್ರಕರಣದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರನಾಗಿ ಬಳಿಕ ಆರೋಪಿಯಾದಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಂಡಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬಳಿಕ ಎಸ್ ಐಟಿ ಗೆ ಪ್ರಕರಣ ಹಸ್ತಾಂತವಾಗಿತ್ತು, ಬಳಿಕ ಎಸ್ ಐಟಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಹೇಳಿದ ಸ್ಥಳಗಳಲ್ಲಿ ಉತ್ಖನನ ನಡೆಸಿತ್ತು, ಆದರೆ ಸರಿಯಾದ ಸಾಕ್ಷಿಗಳು ಸಿಗದ ಕಾರಣ ಆತನನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇದೀಗ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನಿಗೆ ಜಿಲ್ಲಾ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಕೀಲರನ್ನು ಪಡೆದುಕೊಂಡು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಸೆಪ್ಟೆಂಬರ್ 12 ಕ್ಕೆ ಜಾಮೀನು ಅರ್ಜಿ ವಾದ ಮಾಡಿ ಸೆ.16ಕ್ಕೆ ಜಾಮೀನು ಅರ್ಜಿ ಆದೇಶಕ್ಕೆ ನಿಗದಿಪಡಿಸಿದ್ದರು.

ಆರೋಪಿ ಚಿನ್ನಯ್ಯನ ಪ್ರಕರಣ ಗಂಭೀರವಾಗಿದ್ದು, ಪ್ರಕರಣದ ತನಿಖೆ ಜಿಲ್ಲಾ ಸೆಕ್ಷನ್ ಕೋರ್ಟ್ ಅಗಿದ್ದು‌, ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಇನ್ನೂ ಹೆಚ್ಚಿನ ತನಿಖೆ ಮಾಡುವ ಅವಶ್ಯಕತೆ ಇದೆ ಎಂದು ಸೆ.16 ರಂದು ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ ಟಿಎಚ್ ಜಾಮೀನು ಅರ್ಜಿ ವಜಾ ಮಾಡಿ ಆದೇಶ ನೀಡಿದ್ದಾರೆ.

Leave a Comment

Your email address will not be published. Required fields are marked *