ವಿಜಯಪುರ: ಎಸ್ ಬಿಐ ಬ್ಯಾಂಕ್ ದರೋಡೆ ಪ್ರಕರಣ| 6 ಕೆಜಿ ಚಿನ್ನ,‌41.4 ಲಕ್ಷ ನಗದು ಪತ್ತೆ

ಸಮಗ್ರ ನ್ಯೂಸ್: ವಿಜಯಪುರ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಮಹಾರಾಷ್ಟ್ರದಲ್ಲಿ ಬ್ಯಾಗ್ ಒಂದರಲ್ಲಿ ಖದೀಮರು ಕದ್ದಿದ್ದ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದೆ. ಬ್ಯಾಗ್ ನಲ್ಲಿ 6 ಕೆಜಿ 55 ಗ್ರಾಂ ಚಿನ್ನಾಭರಣ ಹಾಗೂ 41.4 ಲಕ್ಷ ನಗದು ಪತ್ತೆಯಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಮನೆಯೊಂದರ ಮೇಲೆ ಬ್ಯಾಗ್ ಬಚ್ಚಿಟ್ಟು ದರೋಡೆಕೋರ ಎಸ್ಕೇಪ್ ಆಗಿದ್ದನು. ಗ್ರಾಮದ ಜನರು ಮಂಗಳವೇಡ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಂಗಳವೇಡ ಪೊಲೀಸರು ವಿಜಯಪುರ ಎಸ್ ಪಿ ಲಕ್ಷ್ಮಣ್ ಗೆ ಮಾಹಿತಿ ನೀಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಒಟ್ಟು 1.4 ಕೋಟಿ ಚಿನ್ನ, 20 ಕೆಜಿ ಚಿನ್ನಾಭರಣ ದರೋಡೆಯಾಗಿತ್ತು. ಪತ್ತೆಯಾದ ಬ್ಯಾಗ್ ನಲ್ಲಿ 1.30 ಲಕ್ಷ ನಗದು ಸಿಕ್ಕಿದೆ. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆ ಮಂಗಳವೇಡ ತಾಲೂಕಿನ ಹುಲಜಂತಿ ಗ್ರಾಮದಲ್ಲಿ ಚಿನ್ನಾಭರಣದ ಬ್ಯಾಗ್ ಹಾಗೂ ದರೋಡೆಕೋರರ ಕೃತ್ಯಕ್ಕೆ ಬಳಸಿದ್ದ ಇಕೋ ವಾಹನ ಪತ್ತೆಯಾಗಿದೆ.

ಗ್ರಾಮಕ್ಕೆ ನುಗ್ಗಿದ್ದ ಇಕೋ ವಾಹನಕ್ಕೆ ಬೈಕ್ ಡಿಕ್ಕಿಯಾಗಿತ್ತು. ಇದನ್ನು ಪ್ರಶ್ನಿಸಿದ್ದಕ್ಕೆ ಪಿಸ್ತೂಲ್ ತೋರಿಸಿ ದರೋಡೆಕೋರರು ಪರಾರಿಯಾಗಿದ್ದರು. ಇದೇ ವೇಳೆ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಎಸೆದು ಹೋಗಿದ್ದಾನೆ. ಮನೆ ಮೇಲ್ಛಾವಣಿಯಲ್ಲಿ ಬ್ಯಾಗ್ ಇಟ್ಟು ದರೋಡೆಕೋರನು ಹೋಗಿದ್ದನು. ಪ್ರಕರಣ ತನಿಖೆ ನಡೆಯುತ್ತಿದೆ. ಶೀಘ್ರವೇ ದರೋಡೆಕೋರರನ್ನು ಬಂಧಿಸುತ್ತೇವೆ ಎಂದು ವಿಜಯಪುರ ಎಸ್ ಪಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *