ಹವಾಮಾನ ವರದಿ| ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕದಲ್ಲಿಯೂ ಪರಿಣಾಮ ಬೀರುತ್ತಿದೆ. ಕಳೆದ ನಾಲ್ಕು ದಿನಗಳಿಂದ ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ, ಒಳನಾಡಿನ ಹಲವು ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತ ಸಂಭವಿಸಿರುವ ಕಾರಣ ರಾಜ್ಯದಲ್ಲಿ ಮುಂದಿನ 5 ದಿನಗಳ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳು, ಚಿತ್ರದುರ್ಗದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ ಮತ್ತು ಮಂಡ್ಯ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

Ad Widget

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಕೊಪ್ಪಳ, ಕಲ್ಬುರ್ಗಿ, ಬೀದರ್, ಯಾದಗಿರಿ ಮತ್ತು ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

Leave a Comment

Your email address will not be published. Required fields are marked *