ಮಲೆಯಾಳಂನ ಖ್ಯಾತ ನಟ ಮೋಹನ್ ಲಾಲ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ.

Ad Widget ... ..

ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದೆ.

Ad Widget

ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಮೋಹನ್ ಲಾಲ್ ಮಲಯಾಳಂ ಸೇರಿ ಬಹು ಭಾಷೆಗಳಲ್ಲಿ ನಟಿಸುವ ಖ್ಯಾತ ನಟ, ನಿರ್ಮಾಪಕ, ವಿತರಕ, ನಿರೂಪಕ ಮತ್ತು ಹಿನ್ನೆಲೆ ಗಾಯಕ, ಅವರು ಮುಖ್ಯವಾಹಿನಿಯ ಬ್ಲಾಕ್ಬಸ್ಟರ್ ಮತ್ತು ಕಲಾತ್ಮಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ತಮ್ಮ ವೃತ್ತಿಜೀವನದ ಅವಧಿಯಲ್ಲಿ, ಮುಖ್ಯವಾಗಿ ಮಲಯಾಳಂ ಸಿನಿಮಾ ಮತ್ತು ತಮಿಳು, ತೆಲುಗು, ಹಿಂದಿ ಮತ್ತು ಕನ್ನಡ ಚಿತ್ರಗಳಲ್ಲಿ 360 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *