ಹಾಸನ: ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಈ ಒಂದು ಉಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಘಟನೆ ನಡೆದಿದ್ದು ಗಣೇಶನ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ.

. Ad Widget . Ad Widget . Ad Widget .

ಹಾಸನದಲ್ಲಿ ಗಣೇಶನಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆಯಲಾಗಿದೆ. ಬೇಲೂರು ಪಟ್ಟಣದಲ್ಲಿ ಕಿಡಿಗೇಡಿಗಳಿಂದ ನೀಚತನ ನಡೆದಿದ್ದು, ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಗಣೇಶನ ಮೂರ್ತಿಗೆ ಹಾರ ಹಾಕಿದ್ದಾರೆ. ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಗಣಪತಿಗೆ ಚಪ್ಪಲಿ ಹಾರ ಹಾಕಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮುಂಜಾನೆ ದೇವರ ದರ್ಶನಕ್ಕೆ ಹೋದ ಭಕ್ತರಿಗೆ ಆಘಾತ ಕಾದಿದೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಇದೀಗ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

Leave a Comment

Your email address will not be published. Required fields are marked *