ಇಂಡಿಯಾ – ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡ ಪ್ರಕಟ| ಶುಭ್ಮನ್ ಗಿಲ್ ಗೆ ನಾಯಕತ್ವ ಪಟ್ಟ

ಸಮಗ್ರ ನ್ಯೂಸ್: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಟೀಮ್ ಇಂಡಿಯಾ ಉಪನಾಯಕ ರಿಷಭ್ ಪಂತ್ ಗಾಯಗೊಂಡಿದ್ದರು. ಹೀಗಾಗಿ ವಿಂಡೀಸ್ ಸರಣಿಯಿಂದ ಹೊರಗುಳಿದಿದ್ದಾರೆ.

Ad Widget ... .. Ad Widget .

ರಿಷಭ್ ಪಂತ್ ಅವರ ಅಲಭ್ಯತೆಯ ನಡುವೆ ಭಾರತ ತಂಡದ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬ್ಯಾಕಪ್ ವಿಕೆಟ್ ಕೀಪರ್ ಆಗಿ ತಮಿಳುನಾಡು ಮೂಲದ ಎನ್​. ಜಗದೀಸನ್ ಆಯ್ಕೆಯಾಗಿದ್ದಾರೆ. ಹಾಗೆಯೇ ಯುವ ಸ್ಪಿನ್ನರ್ ಮಾನವ್ ಸುತಾರ್​ಗೆ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ.

Ad Widget

ಇನ್ನುಳಿದಂತೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡ ಬಹುತೇಕ ಆಟಗಾರರು ವಿಂಡೀಸ್​ ಸರಣಿಯಲ್ಲೂ ಕಣಕ್ಕಿಳಿಯಲಿದ್ದಾರೆ. ಅದರಂತೆ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕವು ಶುಭ್​ಮನ್ ಗಿಲ್​ಗೆ ಫಿಕ್ಸ್. ಐದನೇ ಕ್ರಮಾಂಕದಲ್ಲಿ ಧ್ರುವ್ ಜುರೆಲ್ ಕಾಣಿಸಿಕೊಂಡರೆ, ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಗೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಹಾಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

Leave a Comment

Your email address will not be published. Required fields are marked *