ಕರಾವಳಿ, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಸಾಧಾರಣ ಮಳೆಯಾಗಲಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನೂ ಅಕ್ಟೋಬರ್ 1 ರಿಂದ 3 ರವರೆಗೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೂರು ದಿನ ಮತ್ತೆ ಮಳೆ ಸಕ್ರಿಯವಾಗುವ ಲಕ್ಷಣಗಳು ಇವೆ. ಈ ಮೂರು ದಿನ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಮೂಲಕ ಮುಂದಿನ ವಾರಪೂರ್ತಿ ಮಳೆರಾಯನ ಆರ್ಭಟ ಕಂಡು ಬರುವುದು ಬಹುತೇಕ ಖಚಿತವಾಗಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕಿದೆ.

Leave a Comment

Your email address will not be published. Required fields are marked *