ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡ ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆಯ ಲೋಕದಲ್ಲಿ ವಿಶಿಷ್ಟ ಹೆಸರು ಪಡೆದ ಕಲಾವಿದ ಯಶವಂತ ಸರದೇಶಪಾಂಡೆ ಇನ್ನು ನೆನಪು ಮಾತ್ರ. ಹಾಸ್ಯನಟ, ನಿರ್ದೇಶಕ, ನಾಟಕಕಾರ, ರಚನೆಕಾರ, ಸಂಭಾಷಣಾಕಾರರಾಗಿ ತಮ್ಮ ಕಲೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದ ಯಶವಂತ ಸರದೇಶಪಾಂಡೆ ಅಲ್ಪಕಾಲದ ಅನಾರೋಗ್ಯದಿಂದ ಅಗಲಿದ್ದಾರೆ.

Ad Widget ... ..

ಇವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ಇವರ ಪತ್ನಿ ಮಾಲತಿ ಕೂಡ ಖ್ಯಾತ ಕಿರುತೆರೆ ನಟಿಯಾಗಿದ್ದಾರೆ. ಕನ್ನಡದ ರಿಯಾಲಿಟಿ ಶೋ ಜೋಡಿ ನಂ.1ನಲ್ಲಿ ಭಾಗವಹಿಸಿದ್ದರು. ಪತ್ನಿ ನಟಿ ಮಾಲತಿ, ಮಗಳು ದೋಸ್ತಿಯನ್ನು ಅಗಲಿದ್ದಾರೆ.

Ad Widget

ಅವರು ರೇಡಿಯೋ ಮತ್ತು ದೂರದರ್ಶನಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದು, ಗುರು ಸಂಸ್ಥೆ ಮುಖಾಂತರ “ಆಲ್ ದಿ ಬೆಸ್ಟ್, ರಾಶಿಚಕ್ರ, ಸಹಿ ರೀ ಸಹಿ, ದಿಲ್ ಮಾಂಗೆ ಮೋರ್” ಮುಂತಾದ ನಗೆ ನಾಟಕಗಳ ಮೂಲಕ ರಾಜ್ಯದಾದ್ಯಂತ ಜನರನ್ನು ನಗಿಸಿ ಮನರಂಜಿಸಿದ್ದಾರೆ. ಈ ನಾಟಕಗಳಲ್ಲಿ ಹಾಸ್ಯದ ಜೊತೆಗೆ ಸಮಾಜದ ಸೂಕ್ಷ್ಮ ಸಮಸ್ಯೆಗಳನ್ನು ಹಾಸ್ಯಾತ್ಮಕವಾಗಿ ಚಿತ್ರಿಸಿದ್ದಾರೆ. ರಾಶಿಚಕ್ರ ನಗೆ ನಾಟಕದಲ್ಲಿ ಎರಡು ಗಂಟೆಗಳ ಕಾಲ ಏಕವ್ಯಕ್ತಿ ಅಭಿನಯದ ಮೂಲಕ ಪ್ರೇಕ್ಷಕರನ್ನು ನಗಿಸುತ್ತಾ ಕೂರಿಸಿದ ಸಾಧನೆ, ಕನ್ನಡ ರಂಗಭೂಮಿಯಲ್ಲಿ ಹೊಸ ದಾಖಲೆ ನಿರ್ಮಿಸಿದೆ.

ರಂಗಭೂಮಿಯ ಹೊರತಾಗಿಯೂ ಅವರು ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದಾರೆ. ಯದ್ವಾ ತದ್ವಾ, ಬಣ್ಣದ ಬುಗುರಿ, ದಶಾವತಾರ, ಪರ್ವ, ತುಂತುರು ಧಾರಾವಾಹಿಗಳಲ್ಲಿ ನಟಿಸಿದ್ದು, ಕೆಲವು ಧಾರಾವಾಹಿಗಳಿಗೆ ಸಂಭಾಷಣೆ ಬರೆದಿದ್ದಾರೆ. ಚಲನಚಿತ್ರಗಳಲ್ಲಿಯೂ ತಮ್ಮ ಕಲೆ ಪ್ರದರ್ಶಿಸಿರುವ ಅವರು ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮಶ್ಯಾಮಭಾಮ ಮುಂತಾದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Leave a Comment

Your email address will not be published. Required fields are marked *