ಧರ್ಮಸ್ಥಳ: ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ| ‘ಮಗಳ ಹೆಸರಲ್ಲಿ ಹಣ ಮಾಡಿ ಮನೆ ಕಟ್ಟಿಸಿದೆ’ ಎಂದು ನಿಮ್ಮ ಪಕ್ಷದವರೇ ಟೀಕಿಸುತ್ತಾರೆ ಎಂದ ಕುಸುಮಾವತಿ
ಸಮಗ್ರ ನ್ಯೂಸ್: 2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಸೌಜನ್ಯ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಧರ್ಮಸ್ಥಳದಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ವಿಜಯೇಂದ್ರ ಅವರು ನೇರವಾಗಿ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಮನೆಗೆ ತೆರಳಿದರು. ಅಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು. ತಮ್ಮ ಮಗಳ ಸಾವಿಗೆ ನ್ಯಾಯ ಕೇಳಿದ್ದಕ್ಕಾಗಿ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಕುಸುಮಾವತಿ […]






