ನಟ ವಿಜಯ್ ದಳಪತಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ| ಕನಿಷ್ಠ 29 ಸಾವು; 50ಕ್ಕೂ ಹೆಚ್ಚು ಮಂದಿಗೆ ಗಾಯ
ಸಮಗ್ರ ನ್ಯೂಸ್: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ಹಾಗೂ ಜನಪ್ರಿಯ ನಟ ವಿಜಯ್ ಅವರ ರಾಜ್ಯ ಪ್ರವಾಸದ ಅಂಗವಾಗಿ ಕರೂರಿನಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 29 ಮೃತಪಟ್ಟು, 50ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಮೂವರು ಮಕ್ಕಳು ಕೂಡ ಸೇರಿದ್ದಾರೆ. ಆರಂಭದಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ 50ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ […]










