ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ| ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ – ಸಚಿವ ಸಂತೋಷ್ ಲಾಡ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವ ನೀತಿಯನ್ನು ಎಲ್ಲಾ ಕಂಪನಿಗಳು ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಹೆಣ್ಣು ಮಕ್ಕಳ ಹಿತದೃಷ್ಟಿಯಿಂದ ಸರ್ಕಾರ ಕಾನೂನು ತಂದಿದೆ. ಇದಕ್ಕೂ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಶ್ರೀಮಂತರ ಹೆಣ್ಣು ಮಕ್ಕಳಿಗೆ ಸೌಲಭ್ಯ ಇರುತ್ತದೆ. ದುಡಿಯುವ ವರ್ಗದ ಹೆಣ್ಣುಗಳಿಗೆ ಸರ್ಕಾರ ವರ್ಷಕ್ಕೆ 12 ವೇತನ ಸಹಿತ ರಜೆ ಘೋಷಿಸಿ ಈ ನೀತಿಯನ್ನು ಜಾರಿ ಮಾಡಿದೆ ಎಂದು ಹೇಳಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇದನ್ನು ಕೇವಲ ಕಾನೂನು ಎನ್ನುವ ದೃಷ್ಟಿಯಲ್ಲಿ ನೋಡದೆ ಮಾನವೀಯ ದೃಷ್ಟಿಯಿಂದಲೂ ಕಂಪನಿಗಳು ನೋಡಬೇಕು. ಎಲ್ಲಾ ವರ್ಗಗಳೊಂದಿಗೆ ಚರ್ಚಿಸಿ ನಿಯಮಗಳನ್ನು ರೂಪಿಸಲಾಗಿದೆ. ಋತುಚಕ್ರ ರಜೆ ನೀತಿ ಸಂಬಂಧ ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಲಾಗುವುದು. ಇಲ್ಲವೇ ಸುಗ್ರೀವಾಜ್ಞೆ ತರಲಾಗುವುದು ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *