ರಾಜ್ಯದಲ್ಲಿ ಆರ್ ಎಸ್ಎಸ್ ನಿಷೇಧ!?| ವಿವಾದದ ಕಿಡಿ ಹೊತ್ತಿಸಿದ ಪ್ರಿಯಾಂಕ ಖರ್ಗೆ ಬರೆದ‌ ಪತ್ರ

ಸಮಗ್ರ ನ್ಯೂಸ್: ಕಾಂಗ್ರೆಸ್‌ನೊಳಗೆ ರಾಜ್ಯದ ಸಾರ್ವಜನಿಕ‌ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧಿಸುವ ಕೂಗೆದ್ದಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು, ವಿವಾದದ ಕಿಡಿ ದೊಡ್ಡದಾಗಿ ಹತ್ತಿಕೊಂಡಿದೆ.

Ad Widget ... ..

ಸರ್ಕಾರಿ ಮತ್ತು ಅನುದಾನಿತ ಶಾಲಾ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳು ಹಾಗೂ ಶಾಖೆ ನಡೆಸಲು ಅನುಮತಿ ನಿರಾಕರಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಈ ಮನವಿಯನ್ನು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

Ad Widget

ಪ್ರಿಯಾಂಕ್ ಖರ್ಗೆ ಮನವಿಯಲ್ಲಿ ಏನಿದೆ!?
“ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ.

ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮ್ತುಯುವ ಸಮುದಾಯದ ಮನಸ್ಸಿನಲ್ಲಿ ಭಾರತ ಐಕ್ಯತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ. ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಗ ಮಕ್ಕಳು ಹಾಗೂ ಯುವಜನರ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ. ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ”.ಎಂದು ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

Leave a Comment

Your email address will not be published. Required fields are marked *