ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆ; ಪ್ರಕರಣ ದಾಖಲು

ಸಮಗ್ರ ನ್ಯೂಸ್: ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು.

. Ad Widget . Ad Widget . Ad Widget

ಇಬ್ಬರು ಮಂಡ್ಯದ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ಅವರಿಬ್ಬರೂ ಮೋನಿಶಾ ಮನೆಗೆ ಬಂದಿದ್ದರು. ಅಲ್ಲಿಂದ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರಿಗೂ ಮಾತು ಮತ್ತು ಕಿವಿ ಕೇಳುವುದಿಲ್ಲ ಎಂದು ಹೇಳಲಾಗಿದ್ದು, ಮಾಹಿತಿ ದೊರೆತಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ 9480805363, 9480805300 ಸಂಪರ್ಕಿಸುವಂತೆ ಇಲಾಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. Ad Widget .

Leave a Comment

Your email address will not be published. Required fields are marked *