ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಸಹಕಾರಿ ಸಂಸ್ಥೆಯೊಂದರಲ್ಲಿ ಅಸಲಿ ಎಂದು ನಂಬಿಸಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 6.24 ಲಕ್ಷ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಕಡಬದ ಆರೋಪಿ ಸಹಿತ ಮೂವರನ್ನು ಮಂಗಳೂರಿನ ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Ad Widget ... ..

ಮಂಗಳೂರಿನ ಆಕಾಶಭವನ ಅನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಕಡಬ ತಾಲೂಕು ಬೆಳಂದೂರು ಗ್ರಾಮದ ಅಬ್ದುಲ್ ರಮೀಝ್ (33) ಬಂಧಿತರು.

Ad Widget

ಆರೋಪಿಗಳಿಂದ 5 ಲಕ್ಷ ರೂ. ನಗದು, ಸುಮಾರು 45 ಗ್ರಾಂ. ತೂಕದ ನಕಲಿ ಚಿನ್ನದ ಒಡವೆಗಳು, 20 ಲಕ್ಷ ರೂ. ಮೌಲ್ಯದ ಕಾರು ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡಿರುವ ಸೊತ್ತುಗಳ ಒಟ್ಟು ಮೌಲ್ಯ 26.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಹಾರೀಫ್ ಅಬೂಬಕ್ಕರ್ ಅ.9ರಂದು ಕಾವೂರು ಬಳಿಯ ವಿವಿದೋದ್ದೇಶ ಸಹಕಾರಿ ಸಂಘವನ್ನು ವಂಚಿಸಿ 6.24 ಲಕ್ಷ ರೂ. ಸಾಲ ಪಡೆದಿದ್ದ. ಚಿನ್ನದ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ನಕಲಿ ಎಂದು ತಿಳಿದು ಬಂದಿದ್ದು, ಕಾವೂರು ಠಾಣೆಗೆ ದೂರು ನೀಡಲಾಗಿತ್ತು.

Leave a Comment

Your email address will not be published. Required fields are marked *