ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ

ಸಮಗ್ರ ನ್ಯೂಸ್: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಈ ಮೇಲ್ ಸಂದೇಶ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಇಮೇಲ್ ಐಡಿಗೆ ಅಪರಿಚಿತ ಇ-ಮೇಲ್ ನಿಂದ ಬೆದರಿಕೆ ಸಂದೇಶ ಬಂದಿದ್ದು ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ.

Ad Widget ... ..

ಇನ್ನು ಬೆಂಗಳೂರು ನಗರದಾದ್ಯಂತ ಈ ಹಿಂದೆ ಶಾಲಾ ಕಾಲೇಜುಗಳಿಗೆ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಬಾಂಬ್ ಬೆದರಿಕೆ ಸಂದೇಶ ಕುರಿತಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದಲ್ಲಿ ಎಸ್‌ಐಟಿ ರಚನೆ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೊಂದು ಬಾಂಬ್ ಬೆದರಿಕೆ ಸಂದೇಶ ಬಂದಿದೆ.

Ad Widget

ಪ್ರಾಥಮಿಕ ತನಿಖೆಯಲ್ಲಿ ಸಂದೇಶ ಕಳುಹಿಸಿದ ವ್ಯಕ್ತಿ ತಮಿಳುನಾಡು ಮೂಲದವನು ಎಂಬುದು ಗೊತ್ತಾಗಿದೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 351(4) (ಕ್ರಿಮಿನಲ್‌ ಬೆದರಿಕೆ) ಮತ್ತು 353(1)(ಬಿ) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *