ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು| 11 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಇಂದು(ಅ.20) ಅಶೋಕ ಜನಮನ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ್ದರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿದ್ದು 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.

. Ad Widget . Ad Widget . Ad Widget .

11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು ಮಹಿಳೆಯರು, ಮಕ್ಕಳು ಸೇರಿದ್ದಾರೆ. ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾಗಿದ್ದು ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಅಸ್ವಸ್ಥರಾಗಿದ್ದರೆಂದು ತಿಳಿದುಬಂದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದ್ದು ಕುಡಿಯಲು ನೀರು ಸಿಗದೆ ಜನರ ಪರದಾಡಿದ್ದಾರೆ. ಮಹಿಳೆಯರು ಸಣ್ಣ ಸಣ್ಣ ಮಕ್ಕಳನ್ನು ಕಾರ್ಯಕ್ರಮಕ್ಕೆ ಹಿಡಿದುಕೊಂಡು ಬಂದಿದ್ದ ಹಿನ್ನೆಲೆ ನೂಕು ನುಗ್ಗಲು ಉಂಟಾಗಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಶಾಸಕ ಅಶೋಕ್ ರೈ ಮಾಲಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಕಾರ್ಯಕ್ರಮ ಇದಾಗಿದ್ದು ಸಿ.ಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದರು ಅಶೋಕ ಜನಮನ ಕಾರ್ಯಕ್ರಮದಲ್ಲಿ ಅವ್ಯವಸ್ಥೆಯ ಆಗರದಿಂದ ಕಾಲ್ತುಳಿತ ಉಂಟಾಗಿದ್ದು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಸೇರಿ ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *