ಅಯೋಧ್ಯೆ: ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ

ಸಮಗ್ರ ನ್ಯೂಸ್: ನಿತ್ಯ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿರುವ ಅಯೋಧ್ಯೆಯ ಐತಿಹಾಸಿಕ ರಾಮಮಂದಿರದ ನಿರ್ಮಾಣ ಕಾರ್ಯ ಮುಕ್ತಾಯವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಘೋಷಿಸಿದೆ.

. Ad Widget . Ad Widget . Ad Widget .

ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಟ್ರಸ್ಟ್‌, ‘ಪ್ರಭು ಶ್ರೀರಾಮನ ಎಲ್ಲಾ ಭಕ್ತರಿಗೆ ಮಂದಿರ ನಿರ್ಮಾಣ ಕಾರ್ಯಗಳು ಪೂರ್ಣಗೊಂಡಿವೆ ಎಂದು ತಿಳಿಸಲು ಸಂತೋಷಪಡುತ್ತೇವೆ. ಇದರಲ್ಲಿ ಮುಖ್ಯಮಂದಿರ ಮತ್ತು ಆವರಣದೊಳಗಿನ ಮಹಾದೇವ, ಗಣೇಶ, ಹನುಮಾನ್, ಸೂರ್ಯದೇವ, ಭಗವತಿ ಮತ್ತು ಅನ್ನಪೂರ್ಣ ದೇವರ 6 ಮಂದಿರಗಳು ಸೇರಿವೆ. ಜೊತೆಗೆ ಶೇಷಾವತಾರ ಮಂದಿರವೂ ಪೂರ್ಣಗೊಂಡಿದೆ. ಈ ಮಂದಿರಗಳ ಮೇಲೆ ಧ್ವಜ ಮತ್ತು ಕಲಶವನ್ನು ಸ್ಥಾಪಿಸಲಾಗಿದೆ’ ಎಂದು ತಿಳಿಸಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಇದರ ಜೊತೆಗೆ ಋಷಿಗಳಾದ ವಾಲ್ಮೀಕಿ, ವಸಿಷ್ಠ, ವಿಶ್ವಾಮಿತ್ರ, ಅಗಸ್ತ್ಯ, ಸಂತ ತುಳಸೀದಾಸ ಹಾಗೂ ನಿಷಾದರಾಜ, ಶಬರಿ, ದೇವಿ ಅಹಲ್ಯೆಯ ಮಂಟಪಗಳನ್ನು ನಿರ್ಮಿಸಲಾಗಿದೆ. ಜಟಾಯು ಮತ್ತು ಅಳಿಲಿನ ಪುತ್ಥಳಿಗಳನ್ನು ಸ್ಥಾಪಿಸಲಾಗಿದೆ. ರಸ್ತೆ ನಿರ್ಮಾಣ ಮತ್ತು ಕಲ್ಲಿನ ನೆಲಹಾಸು ಕೆಲಸವನ್ನು ಎಲ್&ಟಿ ಸಂಸ್ಥೆ ನಿರ್ವಹಿಸುತ್ತಿದ್ದರೆ, 10 ಎಕರೆಗಿಂತ ಹೆಚ್ಚಿನ ವಿಸ್ತೀರ್ಣದ ಪಂಚವಟಿಯ ಅಭಿವೃದ್ಧಿಯನ್ನು ಜಿಎಂಆರ್ ಕಾರ್ಯಗತಗೊಳಿಸುತ್ತಿದೆ ಎಂದು ಟ್ರಸ್ಟ್‌ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *