ಸಮಗ್ರ ನ್ಯೂಸ್: ಧರ್ಮಸ್ಥಳ ವಿರುದ್ಧ ದೂರು ದಾಖಲಿಸಿದ್ದ ದೂರುದಾರರ ತಂಡ ಇದೀಗ ಕಂಗಾಲಾಗಿದೆ. ತಿಮರೋಡಿ ಸಹಿತ ಈ ತಂಡದ ಸದಸ್ಯರು ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಇದೀಗ ಕೊನೆಯ ಪ್ರಯತ್ನ ಮಾಡಿದೆ. ಧರ್ಮಸ್ಥಳ ಸುತ್ತ ಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ. ಉತ್ಖನನ ಮಾಡಿ, ತನಿಖೆ ನಡೆಸಿ ಎಂದು ತಾವೇ ಕೊಟ್ಟ ಅತ್ಯಂತ ಮಹತ್ವದ ದೂರನ್ನು ಇದೀಗ ವಜಾಗೊಳಿಸಿ ಎಂದು ಹೈಕೋರ್ಟ್ಗೆ ದೂರುದಾರರು ಅರ್ಜಿ ಸಲ್ಲಿಸಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಬುರುಡೆ ಗ್ಯಾಂಗ್ ಸದಸ್ಯರಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಈ ಪ್ರಯತ್ನ ಮಾಡಿದೆ ಎನ್ನೋದು ಬಯಲಾಗಿದೆ.
ನೂರಾರು ಶವಗಳು, ಬಾಲಕಿಯರ ಶವಗಳು, ಅತ್ಯಾಚಾರಗೊಂಡ ಮಹಿಳೆಯರ ಶವಗಳನ್ನು ಚಿನ್ನಯ್ಯ ಹೂತಿದ್ದಾನೆ. ಧರ್ಮಸ್ಥಳ ದೇವಸ್ಥಾನದ ಪ್ರಮುಖರ ಸೂಚನೆ ಮೇರೆ ಚಿನ್ನಯ್ಯ ಮಾಡಿದ್ದಾನೆ ಎಂದು ಇದೇ ದೂರು ದಾಖಲಿಸಿತ್ತು. ಇದೀಗ ತಮ್ಮ ಈ ಮೂಲದೂರನ್ನು ರದ್ದುಗೊಳಿಸುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಮೂಲಕ ಬಂಧನದಿಂದ ತಪ್ಪಿಸಿಕೊಳ್ಳಲು ಕೊನೆಯ ಪ್ರಯತ್ನವನ್ನು ನಡೆಸುತ್ತಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರನ್ನು ವಜಾಗೊಳಿಸಿ ಎಂದು ದೂರುದಾರರ ತಂಡ ಹೈಕೋರ್ಟ್ಗೆ ಮನವಿ ಮಾಡಿದೆ. ಇವರು ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ, ಎಸ್ಐಟಿ ತನಿಖೆ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಆರಂಭಿಕ ಎಲ್ಲಾ ಹೇಳಿಕೆಯಲ್ಲಿ ಎಸ್ಐಟಿ ತನಿಖೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಇದೇ ತಂಡ ಇದೀಗ ಎಫ್ಐಆರ್ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದೆ.






