ಸಮಗ್ರ ನ್ಯೂಸ್ : ಸುಬ್ರಹ್ಮಣ್ಯ ಸಮೀಪದ ಬಿಸ್ಲೆ ಘಾಟ್ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಮದುವೆಗೆ ತೆರಳುತ್ತಿದ್ದ ದಿಬ್ಬಣದ ವಾಹನ ಪಲ್ಟಿಯಾಗಿ ಹಲವರು ಆಸ್ಪತ್ರೆಗೆ ದಾಖಲಾದ ಘಟನೆ ಇಂದು(ಅ. ೩೦) ನಡೆದಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆ ಕಾರ್ಯಕ್ರಮವಿತ್ತು. ಕೂಡುರಸ್ತೆ ವನಗೂರು ಯುವಕ ಹಾಗೂ ಏನೆಕಲ್ಲಿನ ಯುವತಿ ಜತೆ ಮದುವೆ ಕಾರ್ಯಕ್ರಮ ನಡೆಯಬೇಕಿತ್ತು.
ಈ ಮದುವೆಗಾಗಿ ವರನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಹೀಗೆ ಬರುತ್ತಿರುವಾಗ ವ್ಯಾನ್ ಪಲ್ಟಿಗೊಂಡಿದ್ದು, ಅದರಲ್ಲಿದ್ದ ಹಲವರಿಗೆ ಗಂಭೀರ ಗಾಯವಾಗಿದೆ,
ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್’ ಮೂಲಕ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.






