ಪುತ್ತೂರು: ಅಟೋ – ಕಾರು ನಡುವೆ ಭೀಕರ ಅಪಘಾತ| ಬಾಲಕಿ ದುರಂತ ಸಾವು

ಸಮಗ್ರ ನ್ಯೂಸ್: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕಿ ಸಾವನಪ್ಪಿದ ಘಟನೆ ಶನಿವಾರ ಸಂಜೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಒಳಮೊಗ್ರು ಗ್ರಾಮದ ಪರ್ಪುಂಜ ಕೊಯ್ಲತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

Ad Widget ... ..

ಮೃತರನ್ನು ರಿಕ್ಷಾ ಚಾಲಕ ಹನೀಫ್ ಎಂಬವರ ಮಗಳು ಶಜ್ವಾ ಫಾತಿಮಾ (6) ಎಂದು ತಿಳಿದು ಬಂದಿದೆ. ಇಲ್ಲಿನ ಅಬ್ರೋಡ್ ಹಾಲ್ ಬಳಿಯಲ್ಲಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಪುತ್ತೂರು ನಗರದಿಂದ ತಿಂಗಲಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಆಗಮಿಸುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

Ad Widget

ಪುತ್ತೂರು ತಾಲೂಕಿನ ಬನ್ನೂರು ನಿವಾಸಿಯಾದ ಹನೀಫ್ ಎಂಬವರು ರಿಕ್ಷಾ ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಅಪಘಾತದಲ್ಲಿ ಹನೀಫ್ ಅವರ ಆರು ವರ್ಷದ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಇತರ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ. ಇತರ ಮೂವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *