ತೆಲಂಗಾಣ: ಸಾರಿಗೆ ಬಸ್ ಮೇಲೆ ಮಗುಚಿದ‌ ಟಿಪ್ಪರ್| 17 ಮಂದಿ ದುರಂತ ಸಾವು

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

Ad Widget ... ..

ಸೋಮವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಾಂಡೂರು ಡಿಪೋಗೆ ಸೇರಿದ ಆರ್ ಟಿಸಿ ಬಸ್ ಗೆ ಜಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ.

Ad Widget

ಚೇವೆಲ್ಲಾ ಮಂಡಲದ ಮಿರ್ಜಾಗುಡಾ ಬಳಿ ಈ ಘಟನೆ ನಡೆದಿದೆ. ಬಸ್ ಮೇಲೆ ಜಲ್ಲಿಕಲ್ಲು ಲೋಡ್ ಬಿದ್ದಿದ್ದು, ಹಲವು ಪ್ರಯಾಣಿಕರು ಅದರಲ್ಲಿ ಸಿಲುಕಿಕೊಂಡರು. ಈ ಅಪಘಾತದಲ್ಲಿ ಟಿಪ್ಪರ್ ಚಾಲಕ ಸೇರಿ 17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ 15 ತಿಂಗಳ ಮಗುವೂ ಸೇರಿದೆ.

ಈ ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿ 70 ಮಂದಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಜೆಸಿಬಿ ಸಹಾಯದಿಂದ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.

Leave a Comment

Your email address will not be published. Required fields are marked *