ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಕೋರ್ಟ್ ಗೆ ಹಾಜರ್

ಸಮಗ್ರ ನ್ಯೂಸ್: ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಪತ್ತೆಯಾಗಿದ್ದು, 50 ದಿನಗಳ ಬಳಿಕ ಮಹೇಶ್ ಶೆಟ್ಟಿ ತಿಮರೋಡಿ ಪ್ರತ್ಯಕ್ಷರಾಗಿದ್ದು, ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಮಹೇಶ್ ಶೆಟ್ಟಿ ತಿಮರೋಡಿ ಅವರು ಬರೋಬ್ಬರಿ 50 ದಿನಗಳ ಬಳಿಕ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್‌ಐಟಿ ನೋಟಿಸ್ ಎದುರಿಸುತ್ತಿರುವ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಅವರ ಮೇಲೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧ ಮಹೇಶ್‌ ಶೆಟ್ಟಿ ತಿಮರೋಡಿ ಸೇರಿ ನಾಲ್ವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ ಜಾರಿ ಮಾಡಿತ್ತು. ವಿಚಾರಣೆಗೆ ಹಾಜರಾಗದಿದ್ರೆ ಬಂಧನದ ಎಚ್ಚರಿಕೆ ನೀಡಿತ್ತು. ಬಿಎನ್‌ಎಸ್‌ಎಸ್ 35(3) ಅಡಿಯಲ್ಲಿ ನೋಟಿಸ್ ನೀಡಲಾಗಿತ್ತು.

ಸುಮಾರು ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದ್ರೆ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್, ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

Leave a Comment

Your email address will not be published. Required fields are marked *