ಕಡಬ: ನೇಣಿಗೆ ಕೊರಳೊಡ್ಡಿದ 14ರ ಬಾಲಕ

ಸಮಗ್ರ ನ್ಯೂಸ್: ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ನೂಜಿಬಾಳ್ತಿಲ ಗ್ರಾಮದ ಖಂಡಿಗ‌ದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದ ಗಗನ್ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ . ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *