ಕೊಟ್ಟಿಗೆಹಾರ: ಮತ್ತಿಕಟ್ಟೆ ಸಮೀಪ ನಾಯಿ ದಾಳಿಯಿಂದ ಜಿಂಕೆ ಸಾವು

ಸಮಗ್ರ ನ್ಯೂಸ್: ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು, ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ರಕ್ಷಿಸಿದರೂ, ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

Ad Widget ... ..

ಘಟನೆಯ ನಂತರ ಸಮಾಜಸೇವಕ ಅರೀಫ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಗಾಯಗೊಂಡ ಜಿಂಕೆಯನ್ನು ಸುರಕ್ಷಿತವಾಗಿ ಹಿಡಿದು ಪಶು ಚಿಕಿತ್ಸಾಲಯಕ್ಕೆ ಕರೆತರಿದರು. ಪಶು ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ, ಜಿಂಕೆಯ ಗಾಯಗಳು ಗಂಭೀರವಾಗಿದ್ದರಿಂದ ಅದು ಪ್ರಾಣ ಉಳಿಸಿಕೊಳ್ಳಲಿಲ್ಲ ಎಂದು ಮೂಲಗಳು ತಿಳಿಸಿವೆ.

Ad Widget

ಜಿಂಕೆಯನ್ನು ರಕ್ಷಿಸಲು ತೋರಿದ ಸಮಾಜಸೇವಕ ಅರೀಫ್, ಸ್ಥಳೀಯರು ಹಾಗೂ ಅರಣ್ಯ ಅಧಿಕಾರಿಗಳ ಮಾನವೀಯ ಕಾರ್ಯ ಶ್ಲಾಘನೀಯ.

Leave a Comment

Your email address will not be published. Required fields are marked *