ಸಮಗ್ರ ನ್ಯೂಸ್: ಅಡಿಕೆ ಬೆಳಗಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಅಡಿಕೆ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿ ಬಂಧಕ ಗುಣಗಳನ್ನು ಹೊಂದಿವೆ ಎಂದು ಯೆನಪೊಯ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆಯಲ್ಲಿ ಬಹಿರಂಗವಾಗಿದೆ.
ಮಂಗಳೂರಿನ ಯೆನೆಪೊಯ ವಿಶ್ವವಿದ್ಯಾನಿಲಯವು ಅಡಿಕೆಯ ಮೇಲೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಿ ತಯಾರಿಸಿದ ವರದಿಯಲ್ಲಿ ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಇದು ಸಾಮಾನ್ಯ ಕೋಶಗಳಿಗೆ ಹಾನಿಯನ್ನುಂಟು ಮಾಡುವುದಿಲ್ಲ. ಸಂಪ್ರದಾಯಕವಾಗಿ ಸಂಸ್ಕರಿಸಿದ ಅಡಿಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿವೆ ಎಂದು ತಿಳಿಸಲಾಗಿದೆ.
ಅಡಿಕೆ ಸಾರ ಕ್ಯಾನ್ಸರ್ ಕೋಶಗಳ ವೃದ್ಧಿ ಮತ್ತು ಹರಡುವಿಕೆಯನ್ನು ತಡೆಯುತ್ತದೆ ಎಂಬುದು ಸಂಶೋಧನೆಯಲ್ಲಿ ಪತ್ತೆಯಾಗಿದೆ. ಸಾಂಪ್ರದಾಯಿಕವಾಗಿ ಸಂಸ್ಕರಿಸಿ ದ ಅಡಿಕೆಯನ್ನು ಬಳಸಿದಲ್ಲಿ ಆರೋಗ್ಯದಾಯಕ ಲಾಭಗಳಿವೆ,ಅಡಿಕೆ ಸೇವನೆಯು ಆರೋಗ್ಯಕರ ಕೋಶಗಳಿಗೆ ಯಾವುದೇ ರೀತಿ ಹಾನಿ ಉಂಟು ಮಾಡುವುದಿಲ್ಲ ಎಂದು ಸಂಶೋಧನಾ ವರದಿಯಲ್ಲಿ ತಿಳಿದುಬಂದಿದೆ.
ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ ಅವರು ಯನೆಪೋಯಾ ವಿಶ್ವವಿದ್ಯಾಲಯ ಈ ಮಹತ್ವದ ಅಧ್ಯಯನ ಕೈಗೊಂಡಿರುವುದನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿ ಶ್ಲಾಘಿಸಿದ್ದಾರೆ. ಈ ರೀತಿಯ ವೈಜ್ಞಾನಿಕ ದೃಢೀಕರಣಗಳು ಲಕ್ಷಾಂತರ ಅಡಿಕೆ ಬೆಳೆಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಉತ್ಪನ್ನದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಕ್ಯಾಂಪ್ಕೊ ನಂಬಿದೆ. ಸಂಶೋಧನೆ ನಡೆಸಿರುವ ಯನೆಪೋಯ ವಿಶ್ವವುದ್ಯಾಲಯದ ವಿಜ್ಞಾನಿಗಳು ಮತ್ತು ಸಂಸ್ಥೆಯ ಆಡಳಿತಕ್ಕೆ ಕ್ಯಾಂಪ್ಕೊ ಗೌರವಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಅವರು ತಿಳಿಸಿದ್ದಾರೆ.






