ಪರಪ್ಪನ ಅಗ್ರಹಾರ ವಿಡಿಯೋ ಪ್ರಕರಣ| ನಟ ಧನ್ವೀರ್ ನ ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಆಪ್ತ ಧನ್ವೀರ್ ವಿಡಿಯೋ ರಿಲೀಸ್ ಮಾಡಿದ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ಆರೋಪಿ ದರ್ಶನ ಆಪ್ತ ಧನ್ವೀರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ನಿನ್ನೆ ನಟ ಧನ್ವೀರ್ ನನ್ನು ಸಿಸಿಬಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಮೊಬೈಲ್ ನಲ್ಲಿ ಮಾತನಾಡುತ್ತಿರುವುದು ಮದ್ಯ ಸೇವಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಒಂದು ವಿಡಿಯೋ ಕುರಿತಂತೆ ಕೊಲೆ ಆರೋಪಿ ದರ್ಶನ್ ಆಪ್ತ ಧನ್ವಿರ್ ನನ್ನ ಕರೆಸಿ ವಿಚಾರಣೆ ನಡೆಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

 ಧನ್ವೀರ್ ಮೊಬೈಲ್ ಇಂದ ಯಾವುದೇ ವೀಡಿಯೊಗಳು ಹೋಗಿಲ್ಲ ಎಂದು ವರದಿ ನೀಡಲಾಗಿದೆ. ಜೈಲಿನಲ್ಲಿ ರಾಜಾತಿಥ್ಯದ ವೀಡಿಯೊ ಹಂಚಿಕೆ ಮಾಡಿದ್ದ ಆರೋಪದಡಿ ಸಿಸಿಬಿ ಪೊಲಿಸರು ನಿನ್ನೆಯಿಂದಲೂ ನಟ ಧನ್ವೀರ್ ಅವರನ್ನು ವಿಚಾರಣೆ ನಡೆಸಿದ್ದರು. ಧನ್ವೀರ್ ಫೋನ್‌ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದರು. ಆದರೆ ಧನ್ವೀರ್ ಮೊಬೈಲ್‌ನಿಂದ ಯಾವುದೇ ವೀಡಿಯೊಗಳು ಹೋಗಿಲ್ಲ ಎಂದು ಸಿಸಿಬಿ ರಿಪೋರ್ಟ್ ಮಾಡಿದೆಯಂತೆ.

ಜೈಲು ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ವೀರ್ ಮೇಲೆ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.ಇನ್ನು ವಿಚಾರಣೆ ಮುಗಿಸಿ ಹೊರಬರುತ್ತಿದ್ದಂತೆ ಧನ್ವೀರ್‌ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಸ್ಪೆಷಲ್‌ ಫೋಟೋ ಹಂಚಿಕೊಂಡಿದ್ದಾರೆ. ನಟ ದರ್ಶನ್‌ ಅವರೊಂದಿಗೆ ತೆಗೆಸಿಕೊಂಡಿರುವ ಫೋಟೋ ಶೇರ್‌ ಮಾಡಿದ್ದು, ಇದರಲ್ಲಿ ಹಾರ್ಟ್ ಮತ್ತು ಸ್ಟಾರ್ ಇಮೋಜಿಯನ್ನು ಹಾಕಿದ್ದಾರೆ. ಧನ್ವೀರ್‌ ಹಂಚಿಕೊಂಡಿರುವ ಫೋಟೋ ನೋಡಿ ದರ್ಶನ್‌ ಫ್ಯಾನ್‌ ಖುಷಿಪಟ್ಟಿದ್ದಾರೆ.

Leave a Comment

Your email address will not be published. Required fields are marked *