ಸುರತ್ಕಲ್: ಸರಣಿ ಅಪಘಾತಕ್ಕೆ ಮೂವರು ಬಲಿ

ಸಮಗ್ರ ನ್ಯೂಸ್: ಸರಣಿ ಅಪಘಾತ ನಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.

. Ad Widget . Ad Widget . Ad Widget .

ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ.
ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಡಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *