ನ.23 ಕ್ಯಾಂಪ್ಕೋ‌ಗೆ ಚುನಾವಣೆ| 6 ಸ್ಥಾನಗಳಿಗೆ ಎಂಟು ಮಂದಿ ಕಣದಲ್ಲಿ

ಸಮಗ್ರ ನ್ಯೂಸ್: ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ)ದ ಆಡಳಿತ ಮಂಡಳಿಯ ಚುನಾವಣೆ ನ.23ರಂದು ನಡೆಯಲಿದೆ. ಒಟ್ಟು 19 ನಿರ್ದೇಶಕ ಸ್ಥಾನಗಳಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದ ಆರು ಸ್ಥಾನಗಳಿಗೆ ಎಂಟು ಮಂದಿ ಕಣದಲ್ಲಿದ್ದಾರೆ.

Ad Widget ... ..

ಕರ್ನಾಟಕ ಮತ್ತು ಕೇರಳದ ಅಡಿಕೆ ಮತ್ತು ಕೊಕ್ಕೊ ಬೆಳೆಗಾರರ ಸಂಘಟನೆಯಾಗಿರುವ ಕ್ಯಾಂಪ್ಕೊಗೆ 15 ವರ್ಷಗಳ ನಂತರ ಮತ್ತೆ ಚುನಾವಣೆ ನಡೆಯುತ್ತಿದೆ. 2010ರಲ್ಲಿ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ನಂತರದ ಎರಡು ಅವಧಿಗೆ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿತ್ತು.

Ad Widget

ಪ್ರಸ್ತುತ ಕೇರಳದ ಎಲ್ಲ ಒಂಬತ್ತು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಕೇರಳದಿಂದ ಸಹಕಾರ ಭಾರತಿ ಬೆಂಬಲಿತ ಪದ್ಮರಾಜ ಪಟ್ಟಾಜೆ, ವೆಂಕಟರಮಣ ಭಟ್, ಸತ್ಯನಾರಾಯಣ ಪ್ರಸಾದ್, ಸತೀಶ್ಚಂದ್ರ ಭಂಡಾರಿ, ಸೌಮ್ಯ ಪ್ರಕಾಶ್, ರಾಧಾಕೃಷ್ಣ, ವಿವೇಕಾನಂದ ಗೌಡ, ಗಣೇಶ್ ಕುಮಾರ್, ಸದಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಒಟ್ಟು 10 ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಮಾಲಿನಿ ಪ್ರಸಾದ್, ಗಣೇಶ್, ರಾಘವೇಂದ್ರ ಎಚ್.ಎಂ, ಉತ್ತರ ಕನ್ನಡದ ವಿಶ್ವನಾಥ ಹೆಗಡೆ ಅವಿರೋಧವಾಗಿ ಆಯ್ಕೆಯಾದವರು.

ಕರ್ನಾಟಕ ಒಟ್ಟು 10 ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಮಾಲಿನಿ ಪ್ರಸಾದ್, ಗಣೇಶ್, ರಾಘವೇಂದ್ರ ಎಚ್.ಎಂ, ಉತ್ತರ ಕನ್ನಡದ ವಿಶ್ವನಾಥ ಹೆಗಡೆ ಅವಿರೋಧವಾಗಿ ಆಯ್ಕೆಯಾದವರು.

ಇನ್ನುಳಿದ ಆರು ಸ್ಥಾನಗಳಿಗೆ ದಯಾನಂದ ಹೆಗ್ಡೆ, ಮಹೇಶ್ ಚೌಟ, ಮುರಳೀಕೃಷ್ಣ ಕೆ.ಎನ್, ಪುರುಷೋತ್ತಮ್ ಭಟ್, ಸತೀಶ್ಚಂದ್ರ ಎಸ್.ಆರ್, ತೀರ್ಥರಾಮ ಎ.ವಿ, ಎಂ.ಜಿ. ಸತ್ಯನಾರಾಯಣ, ರಾಮ್ ಪ್ರತೀಕ್ ಕಣದಲ್ಲಿದ್ದಾರೆ.

Leave a Comment

Your email address will not be published. Required fields are marked *