ಸುರತ್ಕಲ್ – ನಂತೂರು – ಬಿಸಿರೋಡ್ ಹೆದ್ದಾರಿ NHAI ಗೆ ಹಸ್ತಾಂತರ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಸುರತ್ಕಲ್-ನಂತೂರು-ಬಿ.ಸಿ. ರಸ್ತೆ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ ಅನ್ನು ಸುಧಾರಿಸಬೇಕೆಂಬ ಬಹುದಿನಗಳ ಬೇಡಿಕೆಗೆ ಕೊನೆಗೂ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿರುವ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ.

Ad Widget ... .. Ad Widget .

ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಜಾಲವನ್ನು ಸುಧಾರಣೆ ಮಾಡುವ ಬೇಡಿಕೆ ತುಂಬಾ ವರ್ಷಗಳಿಂದ ಕೇಳಿಬಂದಿತ್ತು. ಕೊನೆಗೂ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಈ ಮೂಲಕ ಕ್ಯಾ.ಚೌಟ ಅವರ ಪರಿಶ್ರಮಕ್ಕೆ ಫಲ ದೊರೆದಂತಾಗಿದೆ. ಹೆದ್ದಾರಿ ಪ್ರಾಧಿಕಾರದ ಈ ಮಹತ್ವದ ನಿರ್ಧಾರದಿಂದ ಮಂಗಳೂರಿನ ಪ್ರಮುಖ ರಸ್ತೆ ಕಾರಿಡಾರ್‌ಗಳಲ್ಲಿ ಒಂದಾದ ಸುರತ್ಕಲ್ – ನಂತೂರು – ಬಿಸಿ.ರೋಡ್ ಹೆದ್ದಾರಿಯ ಸಮರ್ಪಕ ನಿರ್ವಹಣೆ ಮತ್ತು ಸುಧಾರಣೆಗೆ ಅನೊಮೊದನೆ ದೊರೆತಿದೆ. ಈ ಮೂಲಕ ಇಷ್ಟು ದಿನ ಇದ್ದ ಸಮಸ್ಯೆಗೆ ಶಾಶ್ವತ ಪರಿಹಾರದ ಹಾದಿ ದೊರೆತಿದೆ.

Ad Widget

ಈ ಬಂದರು ಸಂಪರ್ಕ ಹೆದ್ದಾರಿಯು ಹಳಾಗಿದ್ದು, ಪ್ರತಿನಿತ್ಯ ಸಂಚರಿಸುವ ವಾಹನಗಳ ಓಡಾಟಕ್ಕೆ ತುಂಬಾ ಸಮಸ್ಯೆ ಆಗಿತ್ತು. ಇದನ್ನರಿತ ಸಂಸದ ಕ್ಯಾ.ಚೌಟ ಅವರು ಸುರತ್ಕಲ್-ಮಂಗಳೂರು-ಬಿಸಿರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಎನ್‌ಎಚ್‌ಎಐ ವ್ಯಾಪ್ತಿಗೆ ಹಸ್ತಾಂತರ ಮಾಡಲು ತುಂಬಾ ದಿನಗಳಿಂದ ಶ್ರಮವಹಿಸಿದ್ದರು.

ಸುರತ್ಕಲ್- ನಂತೂರು-ಬಿಸಿ ರೋಡ್ ರಸ್ತೆಯು ಪ್ರಸ್ತುತ ವಿಶೇಷ ಉದ್ದೇಶದ ಘಟವಾಗಿ ರಚಿಸಲಾದ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್ ವ್ಯಾಪ್ತಿಗೆ ಬರುತ್ತದೆ. ಈ ರಸ್ತೆ ನಿರ್ವಹಣೆಗೆ ನಿರ್ದಿಷ್ಟ ಎಜೆನ್ಸಿ ಇಲ್ಲದಿರುವುದು, ಆರ್ಥಿಕ ಸಮಸ್ಯೆ ಮತ್ತು ಸರಿಯಾಗಿ ನಿರ್ವಹಣೆ ಮಾಡದಿರುವುದು ಈ ಹೆದ್ದಾರಿ ದುಸ್ಥಿತಿಗೆ ಪ್ರಮುಖ ಕಾರಣ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕ್ಯಾ.ಚೌಟ ಅವರು ಶಾಶ್ವತ ಪರಿಹಾರ ಕಲ್ಪಿಸುವುದಕ್ಕೆ ಪಣತೊಟ್ಟಿದ್ದರು.

ಇದೀಗ ಕೊನೆಗೂ ಹೆದ್ದಾರಿ ಸಚಿವಾಲಯವು ಸುರತ್ಕಲ್‌ನಿಂದ ಬಿಸಿ ರೋಡ್‌ವರೆಗಿನ ಬಂದರು ಸಂಪರ್ಕ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಹಸ್ತಾಂತರಿಸಲು ಅನುಮೋದನೆ ನೀಡಿದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿರುವ ಸಚಿವಾಲಯವು, ಆದಷ್ಟು ಬೇಗ ಸುರತ್ಕಲ್-ಬಿಸಿರೋಡ್ ಹೆದ್ದಾರಿ ಸುಧಾರಣೆ ಹಾಗೂ ರಸ್ತೆ ಸುರಕ್ಷತೆ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಪಿಆರ್ ತಯಾರಿಸುವಂತೆ ಸೂಚನೆ ನೀಡಿದೆ.

Leave a Comment

Your email address will not be published. Required fields are marked *