November 2025

ಮಂಗಳೂರು: ಉದ್ಯಮಿಯ ಪುತ್ರನ ಶವ ನದಿ ತೀರದಲ್ಲಿ ಪತ್ತೆ

ಸಮಗ್ರ ನ್ಯೂಸ್: ಮಂಗಳೂರಿನ ಖ್ಯಾತ ಉದ್ಯಮಿಯ ಪುತ್ರ ನದಿ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಶಾಂಭವಿ ನದಿ ತೀರದಲ್ಲಿ ಅಭಿಷೇಕ್ ಆಳ್ವ (29) ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ. ನಿಖರ ಕಾರಣ ತಿಳಿದು ಬಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಲಿ ತಾಲೂಕಿನ ಬಪ್ಪನಾಡು ಬಳಿ ಈ ಘಟನೆ ನಡೆದಿದೆ. ಈತ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಉದ್ಯಮಿ ನವೀನ್ ಚಂದ್ರ ಆಳ್ವಾ ಪುತ್ರ ಅಭಿಷೇಕ್ ಮೃತಪಟ್ಟ ಯುವಕ. ನ.5 ರಂದು ಮೂಲ್ಕಿ […]

ಮಂಗಳೂರು: ಉದ್ಯಮಿಯ ಪುತ್ರನ ಶವ ನದಿ ತೀರದಲ್ಲಿ ಪತ್ತೆ Read More »

ಬೆಳಗಾವಿ: ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಹೋರಾಟ| ರಾ.ಹೆದ್ದಾರಿ ತಡೆದು ಪ್ರತಿಭಟನೆ| ಲಾಠಿಚಾರ್ಜ್ ನಡೆಸಿದ ಪೊಲೀಸರ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಬೆಳಗಾವಿಯ ಹತ್ತರಗಿ ಬಳಿ ರೈತರು ಉಗ್ರ ಸ್ವರೂಪದ ಹೋರಾಟ ನಡೆಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ದಿಢೀರ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತರಗಿ ಬಳಿ ಹೆದ್ದಾರಿಯಲ್ಲಿ ಬೀಡು ಬಿಟ್ಟಿರುವ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಸಿದ್ದರು. ಆದರೆ ಹೆದ್ದರೈ ಬಂದ್ ಮಾಡದಂತೆ ಪೊಲೀಸರು ಪ್ರತಿಭಟನಾಕಾರರ

ಬೆಳಗಾವಿ: ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಹೋರಾಟ| ರಾ.ಹೆದ್ದಾರಿ ತಡೆದು ಪ್ರತಿಭಟನೆ| ಲಾಠಿಚಾರ್ಜ್ ನಡೆಸಿದ ಪೊಲೀಸರ ಮೇಲೆ ಕಲ್ಲು ತೂರಾಟ Read More »

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ| ಪೋಕ್ಸೊ ಪ್ರಕರಣ ದಾಖಲು.

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯ ಜೊತೆ ಯುವಕನೋರ್ವ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ‌ ಶ್ರೀಶಾಂತ್ ಪೂಜಾರಿ (20) ಎಂದು ಗುರುತಿಸಲಾಗಿದ್ದು, ಈತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಕಟಪಾಡಿ ಮಣಿಪುರದ ನಿವಾಸಿಯಾಗಿರುವ ಈತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್‌ಗೆ

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ| ಪೋಕ್ಸೊ ಪ್ರಕರಣ ದಾಖಲು. Read More »

ಕೊಡಗು: ಸೊಂಟ ನೋವಿಗೆ ಚಿಕಿತ್ಸೆಗೆ ಹೋದ ಯುವಕ‌ ಕ್ಲಿನಿಕ್ ನಲ್ಲಿ ಸಾವು

ಸಮಗ್ರ ನ್ಯೂಸ್: ಸೊಂಟ ನೋವು ಎಂದು ಖಾಸಗಿ ಕ್ಲಿನಿಕ್‌ಗೆ ಹೋದ ಯುವಕ ಸಾವನಪ್ಪಿರುವ ಘಟನೆ ಕೊಡಗಿನ ಸುಂಟಿಕೊಪ್ಪದಲ್ಲಿ ನಡೆದಿದೆ. ವಿನೋದ್ (34) ಮೃತ ಯುವಕ. ಗುರುವಾರ ಸಂಜೆ ಐದು ಗಂಟೆಗೆ ವಿನೋದ್ ಸುಂಟಿಕೊಪ್ಪದಲ್ಲಿರುವ ಉಮಾ ಕ್ಲಿನಿಕ್‌ಗೆ ಸೊಂಟ ನೋವೆಂದು ಹೋಗಿದ್ದರು. ಈ ವೇಳೆ ಯುವಕನಿಗೆ ಎರಡು ಇಂಜೆಕ್ಷನ್ ಅನ್ನು ವೈದ್ಯರು ಕೊಟ್ಟಿದ್ದರು. ನಂತರ ಮನೆಗೆ ಹೋಗುತ್ತಿದ್ದಂತೆ ವಿನೋದ್ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಮನೆಯವರು ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ಆದರೆ ಅಸ್ಪತ್ರೆಗೆ ಬರುವಷ್ಟರಲ್ಲಿ ಯುವಕ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ

ಕೊಡಗು: ಸೊಂಟ ನೋವಿಗೆ ಚಿಕಿತ್ಸೆಗೆ ಹೋದ ಯುವಕ‌ ಕ್ಲಿನಿಕ್ ನಲ್ಲಿ ಸಾವು Read More »

‘ವಂದೇ‌ಮಾತರಂ’ ಗೀತೆಗೆ 150ರ ಹರೆಯ| ಇಂದು ದೇಶಾದ್ಯಂತ ಮೊಳಗಲಿದೆ ದೇಶ ಭಕ್ತಿಗೀತೆ

ಸಮಗ್ರ ನ್ಯೂಸ್: ಇಂದು ವಂದೇ ಮಾತರಂ ಗೀತೆಯ 150 ನೇ ವರ್ಷಾಚರಣೆ. ಈ ಹಿನ್ನೆಲೆ ದೇಶಾದ್ಯಂತ ದೇಶಭಕ್ತಿ ಗೀತೆ ಗಾಯನ ಮೊಳಗಲಿದೆ. ದೇಶದ ಹಲವು ಕಡೆ ವಂದೇ ಮಾತರಂ ಗೀತೆ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಂದೇ ಮಾತರಂ 1950 ರಲ್ಲಿ ಭಾರತ ಗಣರಾಜ್ಯದ ರಾಷ್ಟ್ರೀಯ ಗೀತೆಯಾಗಿ ಅಂಗೀಕರಿಸಲ್ಪಟ್ಟ ಒಂದು ಕವಿತೆಯಾಗಿದೆ. ಇದನ್ನು ಬಂಕಿಮ್ ಚಂದ್ರ ಚಟರ್ಜಿ 1870 ರ ದಶಕದಲ್ಲಿ ಸಂಸ್ಕೃತೀಕೃತ ಬಂಗಾಳಿ ಭಾಷೆಯಲ್ಲಿ ಬರೆದಿದ್ದಾರೆ. ನವೆಂಬರ್ 1875 ರಂದು ಮತ್ತು ಇದನ್ನು ಮೊದಲು 1882 ರಲ್ಲಿ

‘ವಂದೇ‌ಮಾತರಂ’ ಗೀತೆಗೆ 150ರ ಹರೆಯ| ಇಂದು ದೇಶಾದ್ಯಂತ ಮೊಳಗಲಿದೆ ದೇಶ ಭಕ್ತಿಗೀತೆ Read More »

ಕಡಬ: ನೇಣಿಗೆ ಕೊರಳೊಡ್ಡಿದ 14ರ ಬಾಲಕ

ಸಮಗ್ರ ನ್ಯೂಸ್: ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗ‌ದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದ ಗಗನ್ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ . ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ

ಕಡಬ: ನೇಣಿಗೆ ಕೊರಳೊಡ್ಡಿದ 14ರ ಬಾಲಕ Read More »

ಉಪ್ಪಿನಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಮೇಲೆ‌ ನೈತಿಕ ಪೊಲೀಸ್ ಗಿರಿ| ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮೆರೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತರು. ಘಟನೆಯ ವಿವರ;ದಿನಾಂಕ 06-11-2025 ರಂದು ಕಾಲೇಜೊಂದರ 09 ವಿದ್ಯಾರ್ಥಿ/ವಿಧ್ಯಾರ್ಥಿನಿಯರು ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ತಮ್ಮ ಸಹಪಾಠಿಯ ಆರೋಗ್ಯ ವಿಚಾರಿಸಲು ಅಂತಾ ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್ ನಲ್ಲಿ ಬಂದ ಆರೋಪಿಗಳಾದ ಮುಸ್ತಾಫ ಪೆರಿಯಡ್ಕ

ಉಪ್ಪಿನಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಮೇಲೆ‌ ನೈತಿಕ ಪೊಲೀಸ್ ಗಿರಿ| ಇಬ್ಬರು ಆರೋಪಿಗಳ ಬಂಧನ Read More »

ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬಿನ ದರ ನಿಗದಿಯ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಹೊರಿಸಿದ್ದಾರೆ. ‘ಕಬ್ಬಿಗೆ ಗರಿಷ್ಠ ಚಿಲ್ಲರೆ ಮಾರಾಟ ದರ (MRP) ನಿಗದಿ ಮಾಡಬೇಕಿರುವುದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ’ ಎಂದು ಸ್ಪಷ್ಟಪಡಿಸುವ ಮೂಲಕ, ರಾಜ್ಯ ಸರ್ಕಾರದ ಮೇಲಿನ ಒತ್ತಡವನ್ನು ತಗ್ಗಿಸಿ, ಹೋರಾಟದ ದಿಕ್ಕನ್ನು ಕೇಂದ್ರದತ್ತ ತಿರುಗಿಸುವ ರಾಜಕೀಯ ನಡೆ ಪ್ರದರ್ಶಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿ

ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ Read More »

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಸಮಗ್ರ ನ್ಯೂಸ್: ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ Read More »

ಮದುವೆ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ

ಸಮಗ್ರ ನ್ಯೂಸ್: ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ನೆರಳೂರು ಗ್ರಾಮದ ವಾಸಿ ರವಿಕುಮಾರ್ ಮನೆಯಲ್ಲಿ ಖತರ್ನಾಕ್ ದಂಪತಿಯಿಂದ ಈ ದರೋಡೆ ನಡೆದಿದೆ. ರವಿಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬುಧವಾರ ಸಹ ಕೆಲಸಕ್ಕೆ ಎಂದು ಹೋಗಿದ್ದಾಗ ಮನೆಯಲ್ಲಿ ರವಿಕುಮಾರ್ ಪತ್ನಿ ನಾಗವೇಣಿ ಒಬ್ಬರೆ ಇದ್ದರು. ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ ಖತರ್ನಾಕ್ ಜೋಡಿ

ಮದುವೆ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ Read More »