ಸಮಗ್ರ ನ್ಯೂಸ್: ದಿತ್ವಾ ಚಂಡಮಾರುತ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿಯ ಹಲವೆಡೆ ಭಾರೀ ಮಳೆಯಾಗಿದೆ.
ದ.ಕ ಜಿಲ್ಲೆಯ, ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನ ಹಲವೆಡೆ ಸಂಜೆ ವೇಳೆಗೆ ಗಾಳಿ ಸಹಿತ ಭಾರೀ ಮಳೆಯಾಗಿದೆ. ಇಂದು ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಹಾಗೂ ಸೆಕೆ ಜೋರಾಗಿತ್ತು. ಸಂಜೆ ವೇಳೆಗೆ ಸುರಿದ ಅನಿರೀಕ್ಷಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು.
ನಾಳೆಯೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಡಿ.5ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಡಿ.5ರ ಬಳಿಕ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರೆಯಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.






