ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿರೋಧ ವ್ಯಕ್ತವಾದ ಬೆನ್ನಲ್ಲೇ, ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಇದೀಗ ಆಯೋಜಕರು ದಫ್ ಪ್ರದರ್ಶನವನ್ನು ಕೈ ಬಿಟ್ಟಿದ್ದಾರೆ.
ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಇವರ ಸಾಂಸ್ಕ್ರತಿಕ ಕಾರ್ಯಕ್ರಮ ದಫ್ ಪ್ರದರ್ಶನಕ್ಕೆ ಸಿದ್ಧತೆ ನಡೆಸಲಾಗಿತ್ತು.
ಈ ಮಧ್ಯೆ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ನಡೆಯಲಿದ್ದ ದಫ್ ಪ್ರದರ್ಶನಕ್ಕೆ ವಿಹೆಚ್ಪಿ, ಬಜರಂಗದಳ ವಿರೋಧ ವ್ಯಕ್ತಪಡಿಸಿದ್ದವು. ಒಂದು ವೇಳೆ ಚೆನ್ನಕೇಶವ ದೇವಸ್ಥಾನದ ಮುಂಭಾಗ ದಫ್ ಪ್ರದರ್ಶನ ಮಾಡಿದರೆ, ಮಸೀದಿ ಮುಂದೆ ಹನುಮಾನ್ ಚಾಲೀಸ್ ಪಠಣ ಮಾಡುವುದಾಗಿ ಎಚ್ಚರಿಕೆ ನೀಡಿಲಾಗಿತ್ತು.
ದಫ್ ಪ್ರದರ್ಶನಕ್ಕೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಕೊನೆಗೂ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಮಣಿದ ಆಯೋಜಕರು ಚೆನ್ನಕೇಶವ ದೇವಸ್ಥಾನ ಮುಂದೆ ದಫ್ ಪ್ರದರ್ಶನವನ್ನು ಕೈಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ..






