ಸಮಗ್ರ ನ್ಯೂಸ್: ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ನಲ್ಲಿ ಆಂತರಿಕ ಬಿರುಗಾಳಿಯೊಂದು ಭುಗಿಲೆದ್ದಿದೆ. ಒಂದೆಡೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುತ್ತಿರುವ ಸಂಗತಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪದಚ್ಯುತಿಗೆ ಒತ್ತಾಯ ಕೇಳಿಬಂದಿದೆ.
ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ನಲ್ಲಿ ಆಂತರಿಕ ಬಿರುಗಾಳಿಯೊಂದು ಭುಗಿಲೆದ್ದಿದೆ. ಒಂದೆಡೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುತ್ತಿರುವ ಸಂಗತಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪದಚ್ಯುತಿಗೆ ಒತ್ತಾಯ ಕೇಳಿಬಂದಿದೆ.
ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಮತ್ತೆ ಗಾಂಧಿ ಕುಟುಂಬವೇ ಹಿಡಿಯಬೇಕು ಎಂಬ ಕೂಗು ಬಲವಾಗುತ್ತಿದೆ. ಒಡಿಶಾ ಕಾಂಗ್ರೆಸ್‌ನ ಪ್ರಬಲ ನಾಯಕ ಹಾಗೂ ಮಾಜಿ ಶಾಸಕ ಮೊಹಮ್ಮದ್ ಮೊಖಿಮ್ ಅವರು ಸೋನಿಯಾ ಗಾಂಧಿ ಅವರಿಗೆ ಬರೆದಿರುವ ಪತ್ರ ಪಕ್ಷದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಮತ್ತು ರಾಹುಲ್ ಗಾಂಧಿ ಅವರ ಉಸ್ತುವಾರಿಯಲ್ಲಿ ಒಡಿಶಾದಲ್ಲಿ ಕಾಂಗ್ರೆಸ್ ಪಕ್ಷ ಅಧಃಪತನದ ಹಾದಿ ಹಿಡಿದಿದೆ ಎಂದು ಮೊಖಿಮ್ ನೇರವಾಗಿ ಆರೋಪಿಸಿದ್ದಾರೆ. ಹೀಗಾಗಿ ಪಕ್ಷವನ್ನು ಉಳಿಸಬೇಕಾದರೆ ತಕ್ಷಣವೇ ಖರ್ಗೆ ಅವರನ್ನು ಕೆಳಗಿಳಿಸಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಅಧ್ಯಕ್ಷ ಪಟ್ಟ ಕಟ್ಟಬೇಕು ಎಂದು ಅವರು ಸೋನಿಯಾ ಗಾಂಧಿ ಅವರನ್ನು ಆಗ್ರಹಿಸಿದ್ದಾರೆ.







