ಸಕಲಿ ಚಿನ್ನ ಅಡವಿಟ್ಟು ಸಿಕ್ಕಿಬಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ

ಸಮಗ್ರ ನ್ಯೂಸ್: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಅರೆಸ್ಟ್​ ಮಾಡಿದ್ದಾರೆ.

Ad Widget ... ..

ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದ್ದರು.

Ad Widget

ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಗೌಡ ಅವರನ್ನು ಇಂದು ಅಧಿಕೃತವಾಗಿ ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ 1ನೇ ಸಿಸಿಹೆಚ್​ ನ್ಯಾಯಾಲಯ​, ಆರೋಪಿಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ.

Leave a Comment

Your email address will not be published. Required fields are marked *