‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಸ್ವತಃ ಭಾಗವಹಿಸಲು ಶ್ರೀಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೂ ಅವಕಾಶ ಕಲ್ಪಿಸಬೇಕು ಎಂದು ಕೋರಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬುಧವಾರ ಅರ್ಜಿ ಸಲ್ಲಿಸಲಾಗಿದೆ.

. Ad Widget . Ad Widget

‘ಈ ಪ್ರಕರಣದ ಆರೋಪಿಗಳು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ರಿಟ್ ಅರ್ಜಿಯಲ್ಲಿ ಧರ್ಮಸ್ಥಳ ದೇವಸ್ಥಾನದ ಹೆಸರನ್ನು ಉಲ್ಲೇಖಿಸಿದ್ದರು. ಅದನ್ನು ಪರಿಗಣಿಸಿ, ಸಂತ್ರಸ್ತ ಎಂಬ ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಈ ಪ್ರಕರಣದಲ್ಲಿ ಸ್ವತಃ ಭಾಗವಹಿಸಲು ಅವಕಾಶ ನೀಡಬೇಕು ಎಂದು ಕೋರಿ ವಕೀಲ ಸಿ.ವಿ ನಾಗೇಶ್ ಅರ್ಜಿ ಸಲ್ಲಿಸಿದ್ದಾರೆ.

. Ad Widget . . Ad Widget . Ad Widget

ಈ ಅರ್ಜಿಗೆ ಪೂರಕವಾಗಿ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಕುರಿತ ವಿಚಾರಣೆಗೆ ನ್ಯಾಯಾಲಯವು ಇದೇ 3ರಂದು ದಿನ ನಿಗದಿ ಮಾಡಿದೆ’ ಎಂದು ವಕೀಲ ಮಹೇಶ್ ಕಜೆ ಸುದ್ದಿಗಾರರಿಗೆ ತಿಳಿಸಿದರು.

Leave a Comment

Your email address will not be published. Required fields are marked *