ತಂದೆ ತಾಯಿ ಕೌಟುಂಬಿಕ ಕಲಹ|17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ತಂದೆ ತಾಯಿ ಕೌಟುಂಬಿಕ ಕಲಹದಿಂದ ಮನನೊಂದು 17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡ ಘಟನೆ ಬೆಂಗಳೂರಿನ ಹೋಸಕೆರೆಹಳ್ಳಿಯ ಮಂಜುನಾಥ್ ನಗರದಲ್ಲಿ ಜ.1 ರಂದು ನಡೆದಿದೆ.

Ad Widget ... ..

ಮೃತ ಬಾಲಕಿ ಲೇಖನಾ (17) ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಲೇಖನಾ ನಿನ್ನೆ ಮಧ್ಯಾಹ್ನ ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯೊಳಗೆ ನೇಣಿಗೆ ಶರಣಾಗಿದ್ದಾಳೆ. ಸಂಜೆ ಊಟಕ್ಕೆಂದು ತಾಯಿ ಮನೆಗೆ ಬಂದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಿ ಆಕೆ ಮೃತಪಟ್ಟಿರುವುದು ತಿಳಿದುಬಂದಿದೆ. 

Ad Widget

ಮೃತ ಲೇಖನಾ ಇತ್ತೀಚೆಗೆ 10ನೇ ತರಗತಿಯಲ್ಲಿ ಅನುತ್ತೀರ್ಣಗೊಂಡಿದ್ದು, ಕಳೆದ ಕೆಲ ತಿಂಗಳಿಂದ ಮನೆಯಲ್ಲಿಯೇ ಇದ್ದಳು. ವಿದ್ಯಾಭ್ಯಾಸದಲ್ಲಿ ವಿಫಲತೆ ಆಕೆಯ ಮೇಲೆ ಮಾನಸಿಕ ಒತ್ತಡ ಹೆಚ್ಚಿಸಿದ್ದೆನ್ನಲಾಗಿದೆ. ಇದರ ಜೊತೆಗೆ ತಂದೆ-ತಾಯಿಯ ನಡುವಿನ ನಿರಂತರ ಜಗಳಗಳು ಆಕೆಯ ಮನಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದ್ದವು. ಅಪ್ಪ -ಅಮ್ಮನ ಪ್ರೀತಿ ಸಿಗದೆ ಕೊರಗಿನಲ್ಲಿ ಈ ನಿರ್ಧಾರ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *