ತುಮಕೂರು: ಲಾರಿ, ಕ್ರೂಸರ್ ನಡುವೆ ಡಿಕ್ಕಿ| ನಾಲ್ವರು ಮಾಲಾಧಾರಿಗಳು ಸಾವು 

ಸಮಗ್ರ ನ್ಯೂಸ್: ತುಮಕೂರಿನ ಕೋರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ  ನಡೆದಿದೆ. 

Ad Widget ... ..

ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಮೃತರು ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28) ಎಲ್ಲರೂ ಕೊಪ್ಪಳ ಜಿಲ್ಲೆಯ ಕುಕನೂರು ನಿವಾಸಿಗಳು ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

ನಿಂತಿದ್ದ ಲಾರಿಗೆ ವೇಗವಾಗಿ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿಯಾಗಿದ್ದು ಘಟನೆಯಲ್ಲಿ ಹಲವರು ಮಾಲಾಧಾರಿಗಳು  ಗಾಯಗೊಂಡಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *