ಹವಾಮಾನ ವರದಿ| ರಾಜ್ಯದ ಏಳು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ.

Ad Widget ... ..

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Ad Widget

ಮಧ್ಯಪ್ರದೇಶ ಮತ್ತು ನಾಸಿಕ್ ವರೆಗೆ ಹಾಗೂ ರಾಯಗಢ, ರತ್ನಗಿರಿ, ಸಿಂಧುದುರ್ಗ, ಸತಾರಾ, ಸಾಂಗ್ಲಿ, ಕೊಲ್ಹಾಪುರ ಮತ್ತು ಸೋಲಾಪುರ ಸೇರಿದಂತೆ ಮುಂಬೈನ ದಕ್ಷಿಣ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಮರಾಠವಾಡ ಪ್ರದೇಶದ ಜಲ್ನಾ, ಹಿಂಗೋಲಿ ಮತ್ತು ಬೀಡ್‌ನಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಹಾಗೂ ಕೇರಳ, ತಮಿಳುನಾಡು, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಣಹವೆ ಇರಲಿದೆ.

Leave a Comment

Your email address will not be published. Required fields are marked *