ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವುಗಳ ಕುರಿತು ತನಿಖೆಗೆ ನಿರ್ದೇಶಿಸಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಸೌಜನ್ಯಳ ತಾಯಿ‌

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡಕ್ಕೆ ಧರ್ಮಸ್ಥಳದಲ್ಲಿ1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಸಂಬಂಧ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಹೈಕೋರ್ಟ್ ಗೆ ಸೌಜನ್ಯ ತಾಯಿ ಅರ್ಜಿ ಸಲ್ಲಿಸಿದ್ದಾರೆ.

Ad Widget ... ..

ಧರ್ಮಸ್ಥಳದಲ್ಲಿಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು.

Ad Widget

ಸೌಜನ್ಯ ತಾಯಿ ಕುಸುಮಾವತಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಧರ್ಮಸ್ಥಳದಲ್ಲಿ ಘಟಿಸಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಎಸ್‌ಐಟಿ ತನಿಖೆಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ್ ರಾವ್ ಅವರ ಪೀಠವು ಆಲಿಸಿದೆ. ನ್ಯಾಯಾಲಯದಲ್ಲಿ ಕುಸುಮಾವತಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಬಾಲನ್, “ಧರ್ಮಸ್ಥಳದ ಪೋಲೀಸ್ ಠಾಣಾ ವ್ಯಾಪ್ತಿಯೊಂದರಲ್ಲೇ 74 ಅಸಹಜ ಸಾವುಗಳು ನಡೆದಿರುವುದಾಗಿ ವರದಿಯಾಗಿದೆ.

ಈ ಪ್ರಕರಣಗಳ ತನಿಖೆ ಮಾಡಲೆಂದೇ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ, ಎಸ್‌ಐಟಿ ಕೇವಲ ಒಂದು ಎಫ್‌ಐಆರ್ ದಾಖಲಿಸಿದೆ. ಉಳಿದ 74 ಕೊಲೆ, ನಾಪತ್ತೆ, ಸಾವು ಪ್ರಕರಣಗಳಿಗೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿಲ್ಲ. ಇದು ಸರಿಯಾದ ಕ್ರಮವಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಅವರ ವಾದಕ್ಕೆ ಪ್ರತಿವಾದ ಮಂಡಿಸಿದ ಸರ್ಕಾರದ ಪರ ವಕೀಲರು, ಸರ್ಕಾರಕ್ಕೆ ಇನ್ನೂ ಪ್ರಕರಣದ ದಾಖಲೆಗಳನ್ನು ಸಲ್ಲಿಸಿಲ್ಲ. ದಾಖಲೆ ಇಲ್ಲದೇ ಸರ್ಕಾರ ಅಭಿಪ್ರಾಯ ಹೇಳಲು ಹೇಗೆ ಸಾಧ್ಯ? ಎಂದಿದ್ದಾರೆ. ವಾದ-ಪ್ರತಿವಾದ ಆಲಿಸಿದ ಪೀಠವು, ಪ್ರಕರಣ ಇರುವುದು 74 ಅಸಹಜ ಸಾವುಗಳಿಗೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿಲ್ಲ ಎಂಬುದರ ಕುರಿತು. ಸರ್ಕಾರವು ನ್ಯಾಯಾಲಯದಲ್ಲಿ ಲಭ್ಯವಿರುವ ದಾಖಲೆಯನ್ನೇ ಪಡೆದುಕೊಂಡು ಅಭಿಪ್ರಾಯ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮುಂದೂಡಿದ್ದಾರೆ.

Leave a Comment

Your email address will not be published. Required fields are marked *