ಧರ್ಮಸ್ಥಳ ಬುರುಡೆ ಪ್ರಕರಣ| ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪ್ರಕರಣ ಇನ್ನು ತಾರ್ಕಿಕ ಅಂತ್ಯ ಕಂಡಿಲ್ಲ. ಇದೀಗ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

Ad Widget . Ad Widget . Ad Widget . Ad Widget . Ad Widget .

ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರಗಳನ್ನು ಎಸ್​​ಐಟಿ ಅಧಿಕಾರಿಗಳು ಎಫ್​ಎಸ್​ಎಲ್​​​ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್​​​ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Ad Widget . Ad Widget .

ಧರ್ಮಸ್ಥಳ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (SIT) ತನಿಖೆಗೆ ಆದೇಶಿಸಿತ್ತು. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್​​ಐಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಮಾನವನ 7 ಅಸ್ಥಿಪಂಜರ ಪತ್ತೆಯಾಗಿದ್ದವು.

2025 ರ ಸೆಪ್ಟೆಂಬರ್​ 17 ರಂದು 5 ಮತ್ತು ಸೆ.18 ರಂದು 2.. ಹೀಗೆ ಒಟ್ಟು ಏಳು ಅಸ್ಥಿಪಂಜರಗಳನ್ನು ಎಸ್​ಐಟಿ ಅಧಿಕಾರಿಗಳು ಪತ್ತೆಹಚ್ಚಿದ್ದರು. ಅರಣ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಿತಿಯಲ್ಲಿ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಸದ್ಯ ಹೆಚ್ಚಿನ ತನಿಖೆಗಾಗಿ ಬೆಳ್ತಂಗಡಿ ಎಸ್​​ಐಟಿ ಕಚೇರಿಯಿಂದ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್ ಕಚೇರಿಗೆ ಅಸ್ಥಿಪಂಜರಗಳನ್ನು ರವಾನಿಸಲಾಗಿದೆ.

Leave a Comment

Your email address will not be published. Required fields are marked *