ಸಮಗ್ರ ನ್ಯೂಸ್: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಸಾಮಾನ್ಯ ವರ್ಗದ ವಯೋಮಿತಿಯನ್ನು 40 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇದುವರೆಗೂ ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಇತ್ತು. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 38 ವರ್ಷ ಇದ್ದ ವಯೋಮಿತಿಯನ್ನು ಕೂಡ ಸಡಿಲಿಕೆ ಮಾಡಲಾಗಿದೆ. ಡಿಸೆಂಬರ್ 31 2027ರವರೆಗೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.







